ಲೋಕಸಭಾ ಸ್ಪೀಕರ್ ಬಿರ್ಲಾ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿ; ಮೂವರ ಬಂಧನ
ದಯವಿಟ್ಟು ಈ ನಂಬರ್ ಗಳಿಂದ ಬಂದ ಕರೆ ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ
Team Udayavani, May 5, 2022, 10:54 AM IST
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಣ ದ್ವಿಗುಣ ಗೊಳಿಸುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ 2.61 ಲಕ್ಷ ರೂ. ವಂಚನೆ!
ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆಯನ್ನು ಕ್ರಿಯೇಟ್ ಮಾಡಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಲೋಕಸಭಾ ಸ್ಪೀಕರ್ ಕಚೇರಿ ತಿಳಿಸಿದೆ.
ಕೆಲ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಪ್ರೊಫೈಲ್ ಫೋಟೊ ಹಾಕಿ, ನಕಲಿ ಖಾತೆ ಸೃಷ್ಟಿಸಿದ್ದು, ಅದರ ಮೂಲಕ ಸಂಸದರು ಮತ್ತು ಇತರ ಅಧಿಕಾರಿಗಳಿಗೆ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ದಯವಿಟ್ಟು ಈ ನಂಬರ್ ಗಳಿಂದ ಬಂದ ಕರೆ ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ, ಈ ಬಗ್ಗೆ ನಮ್ಮ ಕಚೇರಿಗೆ ಮಾಹಿತಿ ನೀಡಿ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
Some miscreants have created fake account in my name with profile photo & sending messages to MPs & others from nos. 7862092008, 9480918183 & 9439073870. Matter has been reported to authorities concerned. Plz ignore calls/messages from these & other numbers & inform my office.
— Lok Sabha Speaker (@loksabhaspeaker) May 4, 2022
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಕ್ರಿಯೇಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಕಳೆದ ತಿಂಗಳು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಎಂದು ಬಿಂಬಿಸಿಕೊಂಡು ವಿಐಪಿಗಳಿಗೆ ಸಂದೇಶ ಕಳುಹಿಸಿ ಹಣಕಾಸಿನ ನೆರವು ಕೇಳಿದ್ದ ಪ್ರಕರಣ ನಡೆದಿತ್ತು. ಈ ಬಗ್ಗೆ ವಿಷಯ ತಿಳಿದ ನಾಯ್ಡು ಕಚೇರಿ ಗೃಹ ಸಚಿವಾಲಯಕ್ಕೆ ದೂರು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.