ಜಗದೀಪ್ ಧನ್ಕರ್; ಗವರ್ನರ್ ಟು ಉಪರಾಷ್ಟ್ರಪತಿ ಹುದ್ದೆ…ರೈತನ ಮಗನೊಬ್ಬನ ಯಶೋಗಾಥೆ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
Team Udayavani, Jul 18, 2022, 3:53 PM IST
ನವದೆಹಲಿ: “ಒಬ್ಬ ರೈತನ ಮಗನಾಗಿ ಇಂತಹ ದೊಡ್ಡ ಜವಾಬ್ದಾರಿಯ ಹೊಣೆ ಹೊರಲಿದ್ದೇನೆ ಎಂಬ ವಿಷಯವನ್ನು ನಾನು ಕನಸಿನಲ್ಲೂ ಊಹಿಸಿರಲಿಲ್ಲ”…ಇದು ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನ್ಕರ್ ಸೋಮವಾರ (ಜುಲೈ 18) ನಾಮಪತ್ರ ಸಲ್ಲಿಸಿದ ನಂತರ ನೀಡಿದ ಪ್ರತಿಕ್ರಿಯೆಯಾಗಿದೆ.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ಸಂಬಂಧಿಯನ್ನೇ ಚಾಕುವಿನಿಂದ ಇರಿದು ಕೊಲೆಗೈದ…
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಪ್ರತಿಷ್ಠಿತ ಹುದ್ದೆಗೆ ಆಯ್ಕೆಯಾಗುತ್ತಿರುವ ಕುರಿತು ನಿಮಗೆ ಏನು ಅನ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಧನ್ಕರ್, ನಾನು ನಮ್ರತೆಯ, ರೈತ ಕುಟುಂಬದಲ್ಲಿ ಜನಿಸಿದವನು. ಪ್ರಾಥಮಿಕ ಶಿಕ್ಷಣ ಪಡೆಯಲು ಹೆಣಗಾಡಿದ್ದು, ಪ್ರತಿದಿನ ಶಾಲೆಗೆ ಹೋಗಲು ಆರು ಕಿಲೋ ಮೀಟರ್ ದೂರದವರೆಗೆ ನಡೆದುಕೊಂಡು ಹೋಗುತ್ತಿದ್ದೆ ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ನನ್ನಂತಹ ಸಾಮಾನ್ಯ ವ್ಯಕ್ತಿಗೂ ಇಂತಹ ದೊಡ್ಡ ಹುದ್ದೆ ದೊರೆಯಲು ಕಾರಣರಾದ ನಮ್ಮ ಸಂವಿಧಾನ ರಚಿಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಧನ್ಕರ್ ಹೇಳಿದರು. ಪಶ್ಚಿಮಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನ್ಕರ್ ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ವಿರುದ್ಧ ಸ್ಪರ್ಧಿಸಲಿದ್ದಾರೆ.
1951 ಮೇ 18ರಂದು ಜನಿಸಿದ್ದ ಜಗದೀಪ್ ಧನ್ಕರ್ ಅವರು ಪಶ್ಚಿಮಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಮೊದಲು ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದರು. ಮಾಜಿ ಪ್ರಧಾನಿ ಚಂದ್ರಶೇಖರ್ ನೇತೃತ್ವದ ಸರ್ಕಾರದಲ್ಲಿ ಧನ್ಕರ್ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಬಿಎಸ್ಸಿ, ಎಲ್ ಎಲ್ ಬಿ ಪದವೀಧರರಾಗಿರುವ ಜಗದೀಪ್ ಧನ್ಕರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದಿದ್ದರು. ರಾಜಸ್ಥಾನದ ಹಿಂದೂ ಜಾಟ್ ಸಮುದಾಯದ ಧನ್ಕರ್ ಅವರು 1979ರಲ್ಲಿ ಸುದೇಶ್ ಧನ್ಕರ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ (ಕಾಮ್ನಾ) ಪುತ್ರಿಯೊಬ್ಬಳಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.