ಜಲಜೀವನ ಮಿಷನ್ ರಾಜ್ಯದಲ್ಲಿ ಅತಿ ವೇಗವಾಗಿ ಅನುಷ್ಠಾನವಾಗುತ್ತಿದೆ: ಸಚಿವ ಈಶ್ವರಪ್ಪ
ಒಂದೇ ಬಾರಿಗೆ 16 ಯೋಜನೆಗಳಿಗೆ ಅನುಮೋದನೆ ದಾಖಲೆ
Team Udayavani, Feb 11, 2022, 1:28 PM IST
ಬೆಂಗಳೂರು :ಮನೆ ಮನೆಗೂ ಗಂಗೆ (ಜಲಜೀವನ ಮಿಷನ್)ಕರ್ನಾಟಕ ರಾಜ್ಯದಲ್ಲಿ ಅತಿ ವೇಗವಾಗಿ ಅನುಷ್ಠಾನವಾಗುತ್ತಿದ್ದು ಸಂಪುಟ ಸಭೆಯಲ್ಲಿ ಒಂದೇ ಬಾರಿಗೆ 16 ಯೋಜನೆಗಳಿಗೆ ಅನುಮೋದನೆ ಪಡೆದಿರುವುದು ದಾಖಲೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಇಲಾಖೆಯ ಜಲಜೀವನ್ ಮಿಶನ್ ಮತ್ತು ಮನ್ರೇಗಾ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿಸ್ತ್ರತವಾಗಿ ಮಾತನಾಡಿದ ಅವರು, 6,357 ಹಳ್ಳಿಗಳ 6,17,607 ಮನೆಗಳಿಗೆ ಕೊಳಾಯಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತದೆ.ಇಲ್ಲಿಯತನಕ ಒಟ್ಟು 45.44ಲಕ್ಷ ಮನೆಗಳಿಗೆ ನೀರು ಸಂಪರ್ಕ ನೀಡಲಾಗಿದೆ. ಕೇವಲ 2020-21 ರಲ್ಲಿ 3.43ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ದೊರೆತಿದೆ ಎಂದು ತಿಳಿಸಿದರು.
2021-22 ರಲ್ಲಿ 25.17 ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ನೀಡುವ ಗುರಿಯನ್ನು ಹೊಂದಲಾಗಿದ್ದು ಈಗಾಗಲೇ 17.60ಲಕ್ಷ ಕುಟುಂಬಗಳಿಗೆ ಮನೆಯಲ್ಲಿ ಕೋಳಾಯಿ ಸಂಪರ್ಕ ನೀಡಲಾಗಿದೆ. 2022-23 ರಲ್ಲಿ 27.14 ಲಕ್ಷ ಮತ್ತು 23-24ರಲ್ಲಿ 17.45ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಕಲ್ಪಿಸಿ ಇಡಿ ರಾಜ್ಯದ 97.91 ಲಕ್ಷ್ಲ ಗ್ರಾಮೀಣ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿವರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯ 2021-22 ಸಾಲಿನ ಸಾಧನೆಗಳ ವಿವರ
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುಮೋದಿಸಿದ್ದ 13 ಕೋಟಿ ಮಾನವ ದಿನಗಳನ್ನು ಡಿಸಂಬರ್ ತಿಂಗಳಿನಲ್ಲಿಯೇ ಪೂರ್ಣಗೊಳಿಸಿದ ತರುವಾಯ ಮತ್ತೆ 1.40 ಕೋಟಿ ಮಾನವ ದಿನಗಳ ಹೆಚ್ಚುವರಿ ಉದ್ಯೋಗ ನೀಡಲು ರಾಜ್ಯಕ್ಕೆ ಹೆಚ್ಚುವರಿಯಾಗಿ ರೂ 715 ಕೋಟಿ ಅನುದಾನ ಲಭ್ಯವಾಯಿತು. 32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. 30.05 ಲಕ್ಷ ಮಹಿಳೆಯರು 5.80 ಲಕ್ಷ ಹಿರಿಯ ನಾಗರಿಕರಿಗೆ ಮತ್ತು 22,400 ಲಕ್ಷ ಕ್ಕೂ ಹೆಚ್ಚು ವಿಶೇಷ ಚೇತನದವರಿಗೆ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.
ಒಟ್ಟು 4,064 ಕೋಟಿ ಕೂಲಿ ಹಣದ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ವರ್ಷ ದಾಖಲೆಯ 13.61 ಲಕ್ಷ ಕಾಮಗಾರಿಗಳನ್ನು ತೆಗೆದುಕೊಂಡು ಈಗಾಗಲೆ 4.31 ಲಕ್ಷ ಕಾಮಗಾರಿಗಳನ್ನು ಪೂರ್ಣ ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕದಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕರಿಗೆ ಕೆಲಸ ಒದಗಿಸುವುದರಲ್ಲಿ ನಾವು ಸಫಲರಾಗಿದ್ದೇವೆ. ಜಲಶಕ್ತಿ ಅಭಿಯಾನದಲ್ಲಿ ರಾಜ್ಯದಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡು 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ನಾವು ದೇಶದಲ್ಲೇ ಮೊದಲನೇ ಸ್ಥಾನದಲ್ಲಿ ಇದ್ದೇವೆ ಎಂದು ತಿಳಿಸಿದರು.
ನರೇಗಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದಿಂದ ಕಳೆದ 6 ವರ್ಷದಲ್ಲಿ 3,275 ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಕೈಗೆತ್ತಿಕೊಂಡು 2,335 ಕಟ್ಟಡಗಳು ಪೂರ್ಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.