ಫೆ.13ರಂದು ನೂತನ ಪಂಚಮಸಾಲಿ ಪೀಠ ಉದಯ: ವಿರಾಟ್ ರೈತ ಸಮಾವೇಶ
Team Udayavani, Feb 10, 2022, 5:22 PM IST
ಬೆಂಗಳೂರು: ರಾಜ್ಯದ ಪಂಚಮಸಾಲಿ ಸಮುದಾಯದ ಸಂಘಟನೆಯ ನೊಗಕ್ಕೆ ಹೆಗಲಾಗಲು ಜಮಖಂಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಫೆಬ್ರವರಿ 13 ರಂದು ಉದಯವಾಗಲಿದೆ. ಪಂಚಮಸಾಲಿಗಳ ಮೂಲ ಪೀಠದ ಪೀಠಾಧ್ಯಕ್ಷರಾದ ನಾವು ಹಾಗೂ ನಾಡಿನ ಶ್ರೇಷ್ಠ ಸಂತ-ಮಹಾಂತರ ದಿವ್ಯ ಸಾನಿಧ್ಯದಲ್ಲಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿತವಾಗಲಿದೆ ಎಂದು ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಯೋಗ ಸಿಂಹಾಸನಾಧೀಶ್ವರ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.
ಇಂದು ಬೆಂಗಳೂರಿನ ಶ್ವಾಸ ಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯವನ್ನು ಸಂಘಟಿಸಬೇಕು ಹಾಗೂ ನಿರ್ಲಕ್ಷಕ್ಕೆ ಒಳಗಾಗಿದ್ದ ಸಮುದಾಯಕ್ಕೆ ಸಿಗಬೇಕಾದ ನ್ಯಾಯವನ್ನು ಒದಗಿಸಬೇಕು ಎನ್ನುವ ಏಕೈಕ ಉದ್ದೇಶದಿಂದ ಹರಿಹರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠವನ್ನು 2008 ಫೆಬ್ರವರಿ 18 ರಂದು ಸ್ಥಾಪಿಸಲಾಯಿತು. ಅಂದು ನಾಡಿನ ಪ್ರಮುಖ ಮಠಾಧೀಶರುಗಳು ಒಗ್ಗೂಡಿ ಈ ಸಮುದಾಯಕ್ಕೆ ಪೀಠದ ಅವಶ್ಯಕತೆಯನ್ನು ಸಾರಿ ಹೇಳಿದ್ದರು.
ಸುಮಾರು ಒಂದುವರೆ ದಶಕಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಪ್ರಸಿದ್ದಿಯಾಗಿರುವ ಬಾಗಲಕೋಟೆಯ ಜಮಖಂಡಿಯಲ್ಲಿ ಇನ್ನೊಂದು ಪೀಠದ ಉದಯವಾಗುತ್ತಿದೆ. ಅನ್ನ, ಅಕ್ಷರ, ಆರೋಗ್ಯದಂತಹ ತ್ರಿವಿಧ ದಾಸೋಹದ ಕಲ್ಪನೆಯಿಂಧ ಕೃಷ್ಣೆಯ ತಟದಲ್ಲಿ ನೂರಾರು ಮಠಾಧೀಶರುಗಳ ನೇತೃತ್ವದಲ್ಲಿ, ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟ ಚಾರಿಟೇಬಲ್ ಟ್ರಸ್ಟ್‌ನ ಅಡಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಸ್ಥಾಪನೆಯಾಗಿದೆ. ಫೆಬ್ರವರಿ 13 ರಂದು ನೂತನ ಜಗದ್ಗುರು ಪೀಠಾರೋಹಣ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು ವಿರಾಟ್ ರೈತ ಸಮಾವೇಶವನ್ನೂ ಆಯೋಜಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯದ ಪಂಚಮಸಾಲಿ ಹಾಗೂ ಎಲ್ಲಾ ಒಳಪಂಗಡಗಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ 2ಎ ಮೀಸಲಾತಿ ಹಾಗೂ ಕೇಂದ್ರದ ಓ.ಬಿ.ಸಿ ಮೀಸಲಾತಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವುದು. ಸಮುದಾಯದ ಮೂಲ ಉದ್ಯೋಗವಾದ ಕೃಷಿಯಲ್ಲಿ ಆದಾಯ ಕೇಂದ್ರಿತ ಕೃಷಿ ವ್ಯವಸ್ಥೆಗೆ ರೈತರನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಶ್ರೀಪೀಠವು ಪ್ರಧಾನ್ಯತೆ ನೀಡಲಿದೆ ಎಂದು ಹೇಳಿದರು.
ಸಮಾಜದ ಸಂಘಟನೆಯ ನೊಗಕ್ಕೆ ಮತ್ತೊಂದು ಹೆಗಲು
ಪಂಚಮಸಾಲಿ ಸಮುದಾಯ ರಾಜ್ಯದ ವಿವಿಧ ಭಾಗಗಳಲ್ಲಿ ಹಂಚಿಕೊಂಡಿದೆ. ಈ ಸಮುದಾಯದ ಸಂಘಟನೆಗೆ ಕೇವಲ ಒಂದು ಪೀಠದ ವ್ಯಾಪ್ತಿ ಸಾಕಾಗುವುದಿಲ್ಲ. ಈ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದ ಸಮುದಾಯದ ಸಂಘಟನೆಗೆ ಈ ಜಮಖಂಡಿ ಪೀಠ ಸ್ಥಾಪನೆಯಾಗಿದೆ. ನಮ್ಮ ಸಂಘಟನೆಯ ನೊಗಕ್ಕೆ ಮತ್ತೊಂದು ಜೋಡೆತ್ತು ಸಿಕ್ಕಂತಾಗಿದೆ ಎಂದು ಹೇಳಿದರು.
ನಾಡಿನ ಶ್ರೇಷ್ಠ ಸಂತ-ಮಹಾಂತರ ದಿವ್ಯ ಸಾನಿಧ್ಯ, ಸರ್ವ ಸಮಾಜದ ಭಾಂಧವರ ಉಪಸ್ಥಿತಿ ಹಾಗೂ ನಾಡಿನ ಪ್ರಮುಖ ನಾಯಕರುಗಳು ಭಾಗಿ
ಫೆಬ್ರವರಿ 13 ರಂದು ಜಮಖಂಡಿಯ ಅಲಗೂರಿನಲ್ಲಿ ನಡೆಯಲಿರುವ ನೂತನ ಜಗದ್ಗುರು ಪೀಠಾರೋಹಣ ಧರ್ಮಸಭೆ ಕಾರ್ಯಕ್ರಮ ಹಾಗೂ ವಿರಾಟ್ ರೈತ ಸಮಾವೇಶದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಲ್ಲದೆ, ನಾಡಿನ ಶ್ರೇಷ್ಠ ಸಂತ – ಮಹಾಂತರ ದಿವ್ಯ ಸಾನಿಧ್ಯವಿರಲಿದೆ. ಅಲ್ಲದೆ, ಪ್ರಮುಖ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ.
ಇನ್ನೊಂದು ಪೀಠದ ಅಗತ್ಯತೆ
ಇನ್ನೊಂದು ಪೀಠದ ಅಗತ್ಯತೆ ಬಹಳಷ್ಟಿತ್ತು. ನಮ್ಮ ಮೂಲ ಪೀಠದ ಜೊತೆಯಲ್ಲಿ ಹೆಜ್ಜೆ ಹಾಕುವಂತಹ ನೂತನ ಶಕ್ತಿ ಬೇಕಾಗಿತ್ತು ಈ ನಿಟ್ಟಿನಲ್ಲಿ ಇನ್ನೊಂದು ಪೀಠ ಸ್ಥಾಪನೆಯಾಗಿದೆ. ಆದರೆ, ಈಗಾಗಲೇ ಘೋಷಿಸಿರುವಂತೆ ಹರಿಹರ ಪೀಠ ಪಂಚಮಸಾಲಿಗಳ ಪಾಲಿಗೆ ಧರ್ಮಕ್ಷೇತ್ರವಾಗಿರಲಿದೆ. ನಾಡಿನ ಉದ್ದಗಲಕ್ಕೂ ಇನ್ನು ಕೆಲವು ಪೀಠಗಳು ಉದಯವಾಗಲಿ. ನಮ್ಮ ಪೀಠದ ಮೂಲತತ್ವಗಳನ್ನು ಪ್ರಚುರಪಡಿಸುವ ಎಲ್ಲಾ ಪೀಠಗಳಿಗೂ ನಮ್ಮ ಬೆಂಬಲ ಇರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.