ಮೊಣಕಾಲಿನ ಗಾಯದಿಂದ ಗುಣಮುಖ: ಅಭ್ಯಾಸಕ್ಕೆ ಮರಳಿ ಸಂತಸ ವ್ಯಕ್ತ ಪಡಿಸಿದ ಜಡೇಜಾ
Team Udayavani, Feb 23, 2022, 12:42 PM IST
ಲಕ್ನೋ: ಎರಡು ತಿಂಗಳ ನಂತರ ಭಾರತ ತಂಡಕ್ಕೆ ಪುನರಾಗಮನ ಮಾಡುತ್ತಿರುವ ಆಲ್‌ರೌಂಡರ್ ರವೀಂದ್ರ ಜಡೇಜಾ, ಶ್ರೀಲಂಕಾ ವಿರುದ್ಧದ ಮೊದಲ ಟಿ20 ಗೆ ಮುನ್ನ, ತಮ್ಮ ಮೊದಲ ಅಭ್ಯಾಸದ ನಂತರ ತಮ್ಮ ಸಂತಸ ಹೊರ ಹಾಕಿದ್ದಾರೆ.
ಜಡೇಜಾ ಅವರು ಕಳೆದ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರಿಂದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಭಾರತದ ಕೊನೆಯ ಎರಡು ಸರಣಿಗಳನ್ನು ತಪ್ಪಿಸಿಕೊಂಡಿದ್ದರು.
“ಭಾರತ ತಂಡಕ್ಕೆ ಮರಳಿರುವುದು ಸಂತಸ ತಂದಿದೆ. ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಜಡೇಜಾ ಬಿಸಿಸಿಐ ಪೋಸ್ಟ್ ಮಾಡಿದ ವಿಡಿಯೋದಲ್ಲಿ ತಿಳಿಸಿದ್ದಾರೆ.
“ನಾನು ತುಂಬಾ ಫಿಟ್ ಆಗಿದ್ದೇನೆ, ಅಂತಿಮವಾಗಿ ಎರಡು ತಿಂಗಳ ನಂತರ ನಾನು ಭಾರತಕ್ಕಾಗಿ ಆಡುತ್ತಿದ್ದೇನೆ” ಎಂದು ಅವರು ಹೇಳಿದರು.
33 ರ ಹರೆಯದ ಜಡೇಜಾ “ನನ್ನ ವಿರಾಮವನ್ನು ಸರಿಯಾಗಿ ಬಳಸಿಕೊಳ್ಳಲು ಉತ್ಸುಕನಾಗಿದ್ದೆ. ನಾನು ಎನ್‌ಸಿಎಯಲ್ಲಿ ನನ್ನ ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದೆ. ಎರಡು ತಿಂಗಳ ನಂತರ ಆಡುತ್ತಿದ್ದೇನೆ, ಸರಣಿಗಾಗಿ ತುಂಬಾ ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.
“ನಾನು ಬೆಂಗಳೂರಿನಲ್ಲಿ ಬೌಲಿಂಗ್, ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದೆ. ಹಾಗಾಗಿ ಟಚ್ ನಲ್ಲಿದ್ದೆ. ಇಂದು, ನನ್ನ ಮೊದಲ ಅಭ್ಯಾಸಕ್ಕೆ ಇಲ್ಲಿಗೆ ಬಂದ ನಂತರ ನಾನು ತುಂಬಾ ಖುಷಿಯಾಗಿದ್ದೇನೆ ಎಂದರು.
ಭಾರತವು ಗುರುವಾರ ಪ್ರಾರಂಭವಾಗುವ ಮೂರು ಟಿ 20 ಗಳಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ, ನಂತರ ಎರಡು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.