KMF 487 ಹುದ್ದೆಗೆ ಅಂತಿಮ ಪಟ್ಟಿ: ಹೈಕೋರ್ಟ್ ತಡೆ ತೆರವು
Team Udayavani, Apr 21, 2023, 7:58 AM IST
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) 487 ವಿವಿಧ ಹುದ್ದೆಗಳ ನೇಮಕಾತಿ ಕುರಿತ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ವಿಧಿಸಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸಹಿತ ಐದು ಸಂಘಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್ ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.
ಅಲ್ಲದೆ, ನೇಮಕಾತಿಗೆ ಸಂಬಂಧಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ, ನೇಮಕಾತಿ ಆದೇಶ ನೀಡಲು ಅನುಮತಿ ನೀಡಿದೆ. ಆದರೆ ಆಯ್ಕೆ ಪಟ್ಟಿ ಪ್ರಕಟ ಮತ್ತು ನೇಮಕಾತಿ ಆದೇಶ ಎಲ್ಲವೂ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಿ.ಆರ್.ರವಿಶಂಕರ್, ನೇಮಕದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ. ಲಿಖೀತ ಪರೀಕ್ಷೆಯಲ್ಲಿ ಕನ್ನಡವೂ ಒಂದು ವಿಷಯವಾಗಿದೆ. ಆದರೆ ನೇಮಕ ಪರೀಕ್ಷೆಗಳನ್ನು ನಡೆಸಿ ಅನುಭವ ಇಲ್ಲದ, ಕನ್ನಡ ಜ್ಞಾನವಿಲ್ಲದ ಗುಜರಾತ್‌ನ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್‌ಗೆ ಅವಕಾಶ ನೀಡಲಾಗಿದೆ. ಅದಕ್ಕೂ ಮುಖ್ಯವಾಗಿ ಲಿಖೀತ ಪರೀಕ್ಷೆಯ ಫಲಿತಾಂಶವನ್ನು ಸಂದರ್ಶಕರಿಗೆ ನೀಡಿದ್ದಾರೆ. ಇದು ನಿಯಮಬಾಹಿರ. ಹಾಗಾಗಿ ತಡೆ ನೀಡಬೇಕು ಎಂದು ಕೋರಿದರು. ಅಲ್ಲದೆ, ಂಕಗಳನ್ನು ತಿದ್ದಲಾಗಿದೆ.
ಅದಕ್ಕಾಗಿ ಹಲವು ಅಭ್ಯರ್ಥಿಗಳಿಗೆ ಹಣಕ್ಕೆ ಬೇಡಿಕೆಯೊಡ್ಡಲಾಗಿದೆ. ಪ್ರತಿ ಅಭ್ಯರ್ಥಿಗಳಿಂದ ಸುಮಾರು 30 ಲಕ್ಷದಿಂದ 50 ಲಕ್ಷ ರೂ.ಗಳವರೆಗೆ ಲಂಚ ಪಡೆಯಲಾಗಿದೆ. ನೇಮಕಾತಿಗಳು ಭಾರೀ ಅಕ್ರಮ ನಡೆದಿದೆ ಎಂದು ಆರೋಪಗಳ ಬಗ್ಗೆ ಕೆಎಂಎಫ್ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಜತೆಗೆ ಮುಖ್ಯಮಂತ್ರಿಗಳಿಗೂ ನೇಮಕ ತಡೆ ಹಿಡಿಯುವಂತೆ ಕೋರಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಈ ಅಕ್ರಮ ನೇಮಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೆ, ತನಿಖೆ ಮುಗಿಯುವವರೆಗೆ ನೇಮಕ ತಡೆ ಹಿಡಿಯುವಂತೆ ಕೋರಿದ್ದ ಮನವಿಯನ್ನು ಪುರಸ್ಕರಿಸುವಂತೆಯೂ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. ಜತೆಗೆ ಈ 487 ಹುದ್ದೆಗಳ ನೇಮಕದಿಂದ ಪ್ರತಿ ತಿಂಗಳು ವೇತನಕ್ಕೆ 3 ಕೋಟಿ ಮತ್ತು ವರ್ಷಕ್ಕೆ 30ರಿಂದ 40 ಕೋಟಿ ಹೆಚ್ಚುವರಿ ವೆಚ್ಚ ತಗಲಲಿದೆ. ಈ ಹೆಚ್ಚುವರಿ ಹುದ್ದೆಗಳ ಭರ್ತಿ ಅಗತ್ಯವಿಲ್ಲ. ಆದರೂ ನೇಮಕ ಮಾಡಲಾಗುತ್ತಿದೆ. ಇದರಿಂದ ಹಾಲು ಉತ್ಪಾದಕರ ಸಂಘಗಳ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಈ ನೇಮಕದ ಮುಂದೆ ಸಹಕಾರ ಸಂಘಗಳ ಜತೆ ಕೆಎಂಎಫ್ ಚರ್ಚೆ ನಡೆಸಿಲ್ಲ ಎಂದೂ ಅರ್ಜಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.