ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ NOC ಕಡ್ಡಾಯ
Team Udayavani, Jul 20, 2023, 7:09 AM IST
ಬೆಂಗಳೂರು: ರಾಜ್ಯದಲ್ಲಿ 21 ಮೀಟರ್ ಎತ್ತರದ ಕಟ್ಟಡಗಳಿಗೆ ಅಗ್ನಿಶಾಮಕ ದಳದ ನಿರಾಕ್ಷೇಪಣ ಪತ್ರ ಕಡ್ಡಾಯಗೊಳಿಸುವ ಸಂಬಂಧ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಮಸೂದೆ-2021 ಬುಧವಾರ ಮೇಲ್ಮನೆಯಲ್ಲಿ ಅಂಗೀಕಾರಗೊಂಡಿತು.
ಈ ಮೊದಲು ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ದಳದಿಂದ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಕಡ್ಡಾಯ ಇರಲಿಲ್ಲ. ಈಗ 21 ಮೀಟರ್‌ವರೆಗಿನ ಎತ್ತರದ ಕಟ್ಟಡಗಳನ್ನು ಬಹುಮಹಡಿ ಕಟ್ಟಡಗಳು ಎಂದು ಪರಿಗಣಿಸಿ, ಅಂತಹವುಗಳಿಗೆ ಸುರಕ್ಷತೆ ದೃಷ್ಟಿಯಿಂದ ಅಗ್ನಿಶಾಮಕದಳ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಎನ್‌ಒಸಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ಸದನದಲ್ಲಿ ಮಸೂದೆ ಪ್ರಸ್ತಾವ ಮಂಡಿಸಿ ಮಾತನಾಡಿದ ಗೃಹ ಸಚಿವ ಡಾ| ಜಿ. ಪರಮೇಶ್ವರ್, ಬಹುಮಹಡಿ ಕಟ್ಟಡಗಳು ಅದರಲ್ಲೂ ವಿಶೇಷವಾಗಿ ಐಟಿ-ಬಿಟಿ ಕಂಪೆನಿಗಳು ಅತೀ ಹೆಚ್ಚು ಉದ್ಯೋಗ ಸೃಷ್ಟಿ ಜತೆಗೆ ಆದಾಯ ಕೂಡ ತಂದುಕೊಡುವುದರಿಂದ ಅವುಗಳಿಗೆ ಎನ್‌ಒಸಿ ಕಡ್ಡಾಯದಿಂದ ವಿನಾಯಿತಿ ನೀಡಲಾಗಿತ್ತು. ಈಗ ಸುರಕ್ಷತೆ ದೃಷ್ಟಿಯಿಂದ 21 ಮೀಟರ್ ಮತ್ತು ಅದಕ್ಕಿಂತ ಎತ್ತರದ ಎಲ್ಲ ಬಹುಮಹಡಿ ಕಟ್ಟಡಗಳಿಗೆ ಎನ್‌ಒಸಿ ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ನಿಯಮ ರೂಪಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಸಹ ಮೇಲ್ಮನೆಯಲ್ಲಿ ಅಂಗೀಕಾರಗೊಂಡಿತು. ಸಚಿವ ರಾಮಲಿಂಗಾರೆಡ್ಡಿ ಅವರು ಮಸೂದೆ ಮಂಡಿಸಿದರು.
ಬಹುಮಹಡಿ ಕಟ್ಟಡಗಳ ಪ್ರಮಾಣ ಹೆಚ್ಚು
ರಾಜ್ಯದಲ್ಲಿ ಅಗ್ನಿಶಾಮಕದಳ ಮತ್ತು ತುರ್ತು ಸೇವೆಗಳ ನಿಯಮಗಳನ್ನು ಉಲ್ಲಂ ಸಿದ ಪ್ರಕರಣಗಳ ಸಂಖ್ಯೆ 19,194 ಇದ್ದು, ಈ ಪೈಕಿ ಬೆಂಗಳೂರು ನಗರದಲ್ಲೇ 15,924 ದಾಖಲಾಗಿವೆ. ಈ ನಿಯಮ ಉಲ್ಲಂಘನೆಯಲ್ಲಿ ಬಹುಮಹಡಿ ಕಟ್ಟಡಗಳ ಪ್ರಮಾಣ ಹೆಚ್ಚಿದೆ ಎಂದು ಸಚಿವರು ಹೇಳಿದರು.
ನಿಲ್ಲದ ರಸ್ತೆ ಅಪಘಾತಗಳು; ಸಚಿವರ ಬೇಸರ
ಸಾಕಷ್ಟು ದಂಡ ಪ್ರಯೋಗ ಮತ್ತಿತರ ಕ್ರಮಗಳ ನಡುವೆಯೂ ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಗಾಯಾಳುಗಳು ಮತ್ತು ಸಾವಿನ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. 2022ರಲ್ಲಿ ಹೆಚ್ಚು-ಕಡಿಮೆ ಅಪಘಾತಗಳ ಸಂಖ್ಯೆ 40 ಸಾವಿರದ ಆಸುಪಾಸು ಇದ್ದು, 48 ಸಾವಿರ ಜನ ಗಾಯಾಳುಗಳಾಗಿದ್ದಾರೆ. ಇದರಲ್ಲಿ ಸಾವಿನ ಸಂಖ್ಯೆ 11,700ಕ್ಕೆ ಏರಿಕೆಯಾಗಿದೆ. ಗಾಯಾಳು ಮತ್ತು ಮೃತಪಟ್ಟವರಲ್ಲಿ ಪುರುಷರೇ ಅಧಿಕ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.