ಗೃಹ ಮಂಡಳಿಯಿಂದ ಇನ್ಮುಂದೆ ನಿವೇಶನ ಬದಲು ಫ್ಲ್ಯಾಟ್: ವಿ.ಸೋಮಣ್ಣ
Team Udayavani, Jun 20, 2020, 9:56 PM IST
ಬೆಂಗಳೂರು: ಗೃಹ ಮಂಡಳಿಯಿಂದ ಮುಂದಿನ ದಿನಗಳಲ್ಲಿ ನಿವೇಶನ ಬದಲು ಅಪಾರ್ಟ್‌ಮೆಂಟ್ ನಿರ್ಮಿಸಿ ಫ್ಲ್ಯಾಟ್ ನೀಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಶನಿವಾರ ಕರ್ನಾಟಕ ಗೃಹ ಮಂಡಳಿ ಹಾಗೂ ವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಾಸದ ಮನೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಫ್ಲ್ಯಾಟ್ ನಿರ್ಮಿಸಿದರೆ ಹೆಚ್ಚಿನ ಜನರಿಗೆ ನೀಡಬಹುದಾಗಿದೆ ಎಂದು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಮೂಲಕ ರಾಜೀವ್‌ಗಾಂಧಿ ವಸತಿ ಯೋಜನೆ, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ನಿವೇಶನದ ಹಕ್ಕು ಪತ್ರ ನೀಡಲಾಗುವುದು. ಈ ಕುರಿತು ಸಂಪುಟದಲ್ಲೂ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಬಡವರಿಗೆ ಸಣ್ಣ ವಿಸ್ತೀರ್ಣದ ನಿವೇಶನ ನೀಡುವ ಯೋಜನೆ ರೂಪಿಸಲಾಗುವುದು. ಆದರೆ, ನಿವೇಶನ ಏಳು ವರ್ಷ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದರು.
ಕರ್ನಾಟಕ ಗೃಹ ಮಂಡಳಿ ಸ್ವಾಯತ್ತ ಸಂಸ್ಥೆಯಾಗಿದ್ದು ತನ್ನ ಸ್ವಂತ ಕಾಲಿನ ಮೇಲೆ ನಿಂತಿದೆ. ಸಾರ್ವಜನಿಕರಿಗೆ ಮಂಡಳಿ ಮತ್ತಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ಕಾಯೋನ್ಮುಖವಾಗಿದ್ದೇವೆ ಎಂದು ಹೇಳಿದರು.
ಗೃಹ ಮಂಡಳಿಯ ಕಾರ್ಯಪಾಲಕ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಾರ್ಯನಿರ್ವಹಣೆ ಮೇಲೆ ನಿಗಾ ವಹಿಸಲು ಅವರ ವಾನಗಳಿಗೆ ಜಿಪಿಎಸ್ ಅಳವಡಿಸಲು ಸೂಚಿಸಲಾಗಿದೆ ಎಂದರು.
ವಿಜಯಪುರದಲ್ಲಿ ನಿವೇಶನ ಹಗರಣದ ಬಗ್ಗೆ ಪ್ರತಿಕ್ರಿಯಿಸಿ ಅದು ಹಿಂದಿನ ಸರ್ಕಾರದಲ್ಲಿ ಆಗಿದೆ. ಹಗರಣದಲ್ಲಿ ಭಾಗಿಯಾಗಿರುವವರ ಪೈಕಿ ಒಬ್ಬ ಮೃತಪಟ್ಟಿದ್ದಾನೆ. ಉಳಿದವರು ಇದ್ದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತುಮಕೂರು, ಮೈಸೂರಿನಲ್ಲಿಯೂ ನಿವೇಶನಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಆದರೆ, ನಿವೇಶನಗಳ ಹಣ ಗೃಹ ಮಂಡಳಿಗೆ ಇನ್ನೂ ಪಾವತಿಯಾಗಿಲ್ಲ. ಇದೆಲ್ಲದರ ಬಗ್ಗೆ ತನಿಖೆಗೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.