ಪ್ರತಿಯೊಬ್ಬರು ಕೋವಿಡ್ ನಿಯಮ ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಮುಂದಾಗಿ : ದ.ಕ. ಜಿಲ್ಲಾಧಿಕಾರಿ


Team Udayavani, Apr 10, 2021, 6:11 PM IST

ಪ್ರತಿಯೊಬ್ಬರು ಕೋವಿಡ್ ನಿಯಮ ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಮುಂದಾಗಿ : ದ.ಕ. ಜಿಲ್ಲಾಧಿಕಾರಿ

ಮಂಗಳೂರು : ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಸೇರಿದಂತೆ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿ ಸೋಂಕು ನಿಯಂತ್ರಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ತಿಳಿಸಿದರು.

ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕುವಿನ ಪ್ರಕರಣಗಳು ಹೆಚ್ಚಾಗುತ್ತಿವೆ, ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊಸ ಹೊಸ ಮಾರ್ಗಸೂಚಿಗಳನ್ನು ಆಗಿಂದಾಗೆ ಹೊರಡಿಸುತ್ತಿದ್ದು. ಜಿಲ್ಲೆಯ ಸಾರ್ವಜನಿಕರು ಅವುಗಳನ್ನು ಪಾಲಿಸುವುದರೊಂದಿಗೆ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಆರೋಗ್ಯ ಇಲಾಖೆಯವರು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಕೊರೋನಾ ಕರ್ಫ್ಯೂ ನಿಯಮಗಳು ಸೇರಿದಂತೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದ್ದು,
ಪ್ರತಿಯೊಬ್ಬರು ಚಾಚು ತಪ್ಪದೆ ಪಾಲಿಸಬೇಕು ತಪ್ಪಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ದಂಡ ವಿಧಿಸಬೇಕು ಎಂದರು.

ವಿಪತ್ತು ನಿರ್ವಹಣೆ ಕಾಯ್ದೆಯ ಅನ್ವಯ ಕೊರೋನ ಕರ್ಫ್ಯೂ ಅನ್ನು ಇಂದಿನಿಂದ ಏಪ್ರಿಲ್ 20 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೆಲವು ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು ಉಳಿದಂತೆ ಎಲ್ಲ ಸೇವೆಗಳನ್ನು ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ ಎಂದರು.

ಇದನ್ನೂ ಓದಿ :ಹಲವು ಪ್ರತಿಭೆಗಳ ಸಂಗಮ ಕಿರಣ ಕುಮಾರ : ಮಲೇಷ್ಯಾದಲ್ಲಿ ಬೆಳಗಿದ ಯುವ ಪ್ರತಿಭೆ

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ. ದೂರ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಬಹುದು.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ .ಕಾರ್ಮಿಕರು ಹಾಗೂ ನೌಕರರು ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದಲ್ಲಿ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಅಧಿಕೃತ ಟಿಕೇಟ್ ಗಳನ್ನು ತೋರಿಸಿ ಸಂಚರಿಸಬಹುದು .

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪಿಡಿಓಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸೋಂಕಿತ ವ್ಯಕ್ತಿಗಳು ಹೋಂ ಐಸೋಲೇಶನ್ ನಲ್ಲಿ ಇರುವಾಗ ಅವರ ಮೇಲೆ ನಿಗಾ ವಹಿಸಬೇಕು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಕೋವಿಡ್ ರೋಗನಿರೋಧಕ ಲಸಿಕೆಯನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು.

ಇದನ್ನೂ ಓದಿ :ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲ್ಲ, ಶೀಘ್ರವೇ ಕಠಿಣ ನಿರ್ಬಂಧ ಜಾರಿ: ಕೇಜ್ರಿವಾಲ್

ಕೋವಿಡ್ ಸಂಬಂಧಿತ ಜನ ಜಾಗೃತಿ ಕಾರ್ಯಕ್ರಮಗಳು ಹಾಗೂ ಬೀದಿನಾಟಕಗಳನ್ನು ಮಾಡುವುದರ ಮೂಲಕ ಜನರಿಗೆ ಅರಿವು ಮೂಡಿಸಬೇಕು.

ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪೂರಕ ಔಷಧಿ ಸೇರಿದಂತೆ ಮತ್ತಿತರ ಉಪಕರಣಗಳನ್ನು ಕೊರತೆಯಾಗದಂತೆ ದಾಸ್ತಾನು ಇಟ್ಟುಕೊಳ್ಳಬೇಕು.

ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಇಬ್ಬರು ಹೋಂ ಗಾರ್ಡ್ ಗಳನ್ನು ನಿಯೋಜಿಸಿ, ಬೇರೆ ರಾಜ್ಯ, ಜಿಲ್ಲೆಗಳಿಂದ ಈ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ವರದಿ ತರುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.