ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ
Team Udayavani, Dec 7, 2021, 2:23 PM IST
ಸೊರಬ: ಜಿಂಕೆಯನ್ನು ಬೇಟೆಯಾಡಿ ಅರಣ್ಯ ಪ್ರದೇಶದಲ್ಲಿ ಮಾಂಸ ಹಂಚಿಕೊಳ್ಳಲು ತಯಾರಿ ನಡೆಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಓರ್ವನನ್ನು ಬಂಧಿಸಿ, ಎರಡು ಬೈಕ್ ಮತ್ತು ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಬಂಧಿತ ಆರೋಪಿ. ಗ್ರಾಮದ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿಯಿಂದ 10 ಕೆ.ಜಿ ಜಿಂಕೆ ಮಾಂಸ, ಎರಡು ಕತ್ತಿ ಮತ್ತು ಎರಡು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕೆರೆಕೊಪ್ಪ ಗ್ರಾಮದ ಬೂದ್ಯಪ್ಪ, ನಾಗಪ್ಪ, ಆಸೀಫ್, ಫೈಜಾನ್ ತಲೆಮರೆಸಿಕೊಂಡಿದ್ದಾರೆ.
ಸಾಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಹಾಗೂ ಸೊರಬ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಬಸ್ರೂರ್ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಆನವಟ್ಟಿ ವಲಯ ಅರಣ್ಯಾಧಿಕಾರಿ ಜಾವೆದ್ ಬಾಷಾ ಅಂಗಡಿ, ಡಿವೈಆರ್ಎಫ್ಒ ವೀರಭದ್ರಯ್ಯ, ಅರಣ್ಯ ರಕ್ಷಕರಾದ ಟಿ. ಮುರುಳಿ, ಉಮೇಶ ಬೇವಿನಗಿಡದ, ದೊಡ್ಡಬಸಯ್ಯ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.