ಬಿಜೆಪಿ ಮಾಜಿ ಸಂಸದ ಮಖನ್ ಸಿಂಗ್ ಸೋಲಂಕಿ ಕಾಂಗ್ರೆಸ್ ಸೇರ್ಪಡೆ
Team Udayavani, Apr 1, 2023, 2:10 PM IST
ಭೋಪಾಲ್: ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಮಾಜಿ ಸಂಸದ ಮಖನ್ ಸಿಂಗ್ ಸೋಲಂಕಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ಪಿಟಿಐ ಪ್ರಕಾರ, ಬರ್ವಾನಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.ಸೋಲಂಕಿ ಅವರು 2009 ರಲ್ಲಿ ಖಾರ್ಗೋನ್-ಬರ್ವಾನಿ ಕ್ಷೇತ್ರದಿಂದ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು.
ಈ ಸಂದರ್ಭದಲ್ಲಿ, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಮಖನ್ ಸಿಂಗ್ ಸೋಲಂಕಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿ, “ನಮ್ಮ ಪಕ್ಷಕ್ಕೆ ಸೇರಿದ ನಂತರ ಮಖನ್ ಸಿಂಗ್ ಸೋಲಂಕಿ ಅವರು ತಮ್ಮ ಸ್ಪಷ್ಟ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವರನ್ನು ಎಂದಿಗೂ ಗೌರವಿಸಲಿಲ್ಲ. ಜೀವನದಲ್ಲಿ ಎಂದೂ ಚುನಾವಣೆಯಲ್ಲಿ ಸೋಲದ ವ್ಯಕ್ತಿಯನ್ನು ಬಿಜೆಪಿಯಲ್ಲಿ ಮೆಚ್ಚಿಕೊಳ್ಳದಿರುವುದು ಬೇಸರ ತಂದಿದೆ. ಬಿಜೆಪಿ ಎಂದಿಗೂ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸಲಿಲ್ಲ ಮತ್ತು ಯಾವಾಗಲೂ ಅವರನ್ನು ಅಗೌರವಿಸುತ್ತದೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಬಿಜೆಪಿ ಅಗೌರವಿಸುತ್ತದೆ. ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ದೂರದೃಷ್ಟಿಯ ಅಡಿಯಲ್ಲಿ ಕಾಂಗ್ರೆಸ್ ಯಾವಾಗಲೂ ಈ ರಾಷ್ಟ್ರದ ಅಲ್ಪಸಂಖ್ಯಾತರನ್ನು ಗೌರವಿಸುತ್ತದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ 2018 ರ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. 230 ಸದಸ್ಯರ ಸದನದಲ್ಲಿ ಕಾಂಗ್ರೆಸ್ 114 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿ 109 ಸ್ಥಾನಗಳನ್ನು ಗೆದ್ದಿತ್ತು.
ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿತು, ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಹಲವಾರು ಶಾಸಕರು ಹೊರನಡೆದು ಬಿಜೆಪಿಗೆ ಸೇರಿದ ನಂತರ ಮಾರ್ಚ್ 2020 ರಲ್ಲಿ ಸರಕಾರ ಪತನವಾಗಿ, ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಮರಳಲು ದಾರಿ ಮಾಡಿಕೊಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.