ಪಾಕಿಸ್ತಾನ: ಕರಾಚಿ ಯೂನಿರ್ವಸಿಟಿ ಆವರಣದಲ್ಲಿ ಸ್ಫೋಟ, ನಾಲ್ವರು ಸಾವು, ಹಲವರು ಗಂಭೀರ
ಸ್ಫೋಟದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ
Team Udayavani, Apr 26, 2022, 4:27 PM IST
ಕರಾಚಿ: ಪಾಕಿಸ್ತಾನದ ಕರಾಚಿ ಯೂನಿರ್ವಸಿಟಿ ಆವರಣದೊಳಗಿದ್ದ ವ್ಯಾನ್ ಸ್ಫೋಟಗೊಂಡ ಪರಿಣಾಮ ಚೀನಾದ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ (ಏಪ್ರಿಲ್ 26) ಸಂಜೆ ನಡೆದಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇದನ್ನೂ ಓದಿ:ಹಿಜಾಬ್ ತೀರ್ಪಿನ ವಿರುದ್ಧದ ಮೇಲ್ಮನವಿ ಶೀಘ್ರ ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ
ಕರಾಚಿ ಯೂನಿರ್ವಸಿಟಿಯ ಕನ್ಫೂಶಿಯಸ್ ಇನ್ಸ್ ಟಿಟ್ಯೂಟ್ ಸಮೀಪದಲ್ಲಿದ್ದ ವ್ಯಾನ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಜಿಯೋ ಟಿವಿ ವರದಿ ತಿಳಿಸಿದೆ.
ಸ್ಫೋಟದ ಘಟನೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ರಕ್ಷಣಾ ಮತ್ತು ಭದ್ರತಾ ಪಡೆಗಳು ದೌಡಾಯಿಸಿದ್ದು, ಸ್ಥಳವನ್ನು ಸುತ್ತುವರೆದು ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ಹೇಳಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.
ಪೊಲೀಸ್ ಮೂಲಗಳ ಪ್ರಕಾರ, ವ್ಯಾನ್ ನಲ್ಲಿ ಏಳರಿಂದ ಎಂಟು ಮಂದಿ ಇದ್ದಿರುವುದಾಗಿ ತಿಳಿಸಿದ್ದು, ಸ್ಫೋಟದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.