ಮೈಸೂರು: ನಕಲಿ ಡಾಕ್ಟರೇಟ್ ಪದವಿ ಪ್ರದಾನ! ಡಿಸಿಪಿ ನೇತೃತ್ವದಲ್ಲಿ ದಾಳಿ, ಆಯೋಜಕರು ಪರಾರಿ
Team Udayavani, Sep 26, 2020, 4:46 PM IST
ಮೈಸೂರು: ನಗರದಲ್ಲಿ ನಕಲಿ ವಿಶ್ವವಿದ್ಯಾಲಯ ಹೆಸರಿನಲ್ಲಿ ಡಾಕ್ಟರೇಟ್ ಪದವಿ ಪ್ರದಾನ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಪದವಿ ಪ್ರದಾನ ಕಾರ್ಯಕ್ರಮದ ವೇಳೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಈ ಒಂದು ನಕಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು ಆದರೆ ಕಾರ್ಯಕ್ರಮದ ಮೊದಲೇ ಡಿಸಿಪಿ ಪ್ರಕಾಶ್ ಗೌಡ ಅವರು ಶಾಸಕರಲ್ಲಿ ನಕಲಿ ಕಾರ್ಯಕ್ರಮದ ಕುರಿತು ಮನವರಿಕೆ ಮಾಡಿದ್ದಾರೆ.
ಪೊಲೀಸರ ಪರಿಶೀಲನೆ ವೇಳೆ ಕಾರ್ಯಕ್ರಮ ಆಯೋಜಕರಲ್ಲಿ ಕೆಲವರು ಪರಾರಿಯಾಗಿದ್ದು, ಮೂರಕ್ಕೂ ಹೆಚ್ಚು ಆಯೋಜಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಭೂಸುಧಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರ
ಇಂಟರ್‌ನ್ಯಾಷನಲ್ ಗ್ಲೋಬಲ್ ಪೀಸ್ ವಿ.ವಿ. ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ೧೫೦ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ಕಾರ್ಯಕ್ರಮ ಆಯೋಜಕರು ಮುಂದಾಗಿದ್ದರು ಎನ್ನಲಾಗಿದೆ.
ಕಾರ್ಯಕ್ರಮದ ಪ್ರಶಸ್ತಿ ಪತ್ರ, ಫಲಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಪ್ರಕಾಶ್ ಗೌಡ ತಿಳಿಸಿದ್ದಾರೆ.
ಇದನ್ನೂ ಓದಿ:ಪಿಎಂ ಮೋದಿ ಬಹುರಾಷ್ಟ್ರೀಯ ಕಂಪನಿಗಳ ಮಧ್ಯವರ್ತಿ: ಮಾಜಿ ಶಾಸಕ ಶ್ರೀರಾಮರೆಡ್ಡಿ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.