ಇಂದಿನಿಂದ ತವರು ಜಿಲ್ಲೆಯಲ್ಲೇ ಸಿಎಂ ಸಿದ್ದರಾಮಯ್ಯ ಠಿಕಾಣಿ
ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕಾರ್ಯಕ್ರಮ ಯಶಸ್ಸಿಗೆ ಪಣ
Team Udayavani, Aug 27, 2023, 6:25 AM IST
ಬೆಂಗಳೂರು: ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆ ಇದೇ ತಿಂಗಳು 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಪೈಕಿ ಮಹತ್ವದ್ದಾಗಿದೆ. ಅತಿ ಹೆಚ್ಚು ಫಲಾನುಭವಿಗಳು ಮಾತ್ರವಲ್ಲ, ಯೋಜನಾ ವೆಚ್ಚವೂ ಎಲ್ಲದಕ್ಕಿಂತ ಹೆಚ್ಚಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಗೃಹಲಕ್ಷ್ಮೀ ಜಾರಿಗೆ ಕಾಂಗ್ರೆಸ್ ನಿರ್ಧರಿಸಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗಿದೆ. ತಮ್ಮ ತವರು ಜಿಲ್ಲೆಯಲ್ಲೇ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ ಸಿದ್ದರಾಮಯ್ಯನವರೇ ಮುತುವರ್ಜಿಯಿಂದ ಮೇಲ್ವಿ ಚಾರಣೆ ನಡೆಸಲು ನಿರ್ಧರಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಮೈಸೂರಿಗೆ ಭೇಟಿ ನೀಡಿ ಬಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಮೈಸೂರಿನಲ್ಲೇ ಇದ್ದಾರೆ.
ಮೈಸೂರು, ಚಾಮರಾಜನಗರ ಉಸ್ತುವಾರಿ ಸಚಿವರಾದ ಡಾ| ಎಚ್.ಸಿ.ಮಹದೇವಪ್ಪ, ವೆಂಕಟೇಶ್ ಕೂಡ ತಮಗೆ ವಹಿಸಿದ ಜವಾಬ್ದಾರಿಯಲ್ಲಿ ನಿರತರಾಗಿದ್ದು, ಸಿಎಂ ಜತೆ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೂಡ ಇದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿ ಸಿದ ಬಳಿಕ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ನಡೆ ಸುವ ದೀರ್ಘ ಪ್ರವಾಸ ಇದಾಗಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.