ಪೂರ್ಣ ಬಹುಮತದ BJP ಸರಕಾರ-ಅತಂತ್ರ ಸ್ಥಿತಿ ನಿರ್ಮಾಣವಾಗದು: CM ಬೊಮ್ಮಾಯಿ
ಮೋದಿ ಪ್ರಚಾರದಿಂದ ಬಲ
Team Udayavani, May 12, 2023, 8:03 AM IST
ಹುಬ್ಬಳ್ಳಿ: ಸಮೀಕ್ಷೆಗಳು ಏನೇ ಹೇಳಲಿ, ನಮಗೆ ವಿಶ್ವಾಸವಿದೆ. ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಮೀಕ್ಷೆಗಳು ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಲಿದೆ ಎಂದಿದ್ದವು. ಆದರೆ, 104 ಸ್ಥಾನ ಪಡೆಯುವುದರೊಂದಿಗೆ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈಗಲೂ ನಮಗೆ ಬಹುಮತ ದೊರೆಯಲಿದೆ. ಬಿಜೆಪಿಗೆ 150 ಸ್ಥಾನ ದೊರೆಯಲಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.
ಒಂದು ವೇಳೆ ಅತಂತ್ರ ವಿಧಾನಸಭೆ ರಚನೆಯಾದರೆ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ ಉತ್ತರ ನೀಡಲಾರೆ. ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದಾಗ ಅತಂತ್ರದ ಮಾತೇ ಬರಲ್ಲ. ಪ್ರಧಾನಿ ಮೋದಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಪ್ರಚಾರ ಸಭೆ, ರೋಡ್ ಶೋ ನಡೆಸಿದ್ದರಿಂದ ಹೆಚ್ಚಿನ ಬಲ ತಂದು ಕೊಟ್ಟಿದೆ. ವಿಶೇಷವಾಗಿ ಯುವಕರು, ಮಹಿಳೆಯರು ಬಿಜೆಪಿ ಪರ ವಾಲಿದ್ದು ನಮಗೆ ಲಾಭವಾಗಲಿದೆ ಎಂದರು.
ದೊಡ್ಡ ಪ್ರಮಾಣದ ಗೆಲುವು: ಬೊಮ್ಮಾಯಿ
ಶಿಗ್ಗಾವಿ ಕ್ಷೇತ್ರದ ಮತ ದಾರರು ನನಗೆ ತೋರಿ ರುವ ಪ್ರೀತಿ, ಬೆಂಬಲಕ್ಕೆ ನಾನು ಚಿರಋಣಿಯಾಗಿದ್ದಾನೆ. ಮತ ದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ದೊಡ್ಡ ಪ್ರಮಾಣದ ಗೆಲುವು ತಂದು ಕೊಡಲಿದ್ದಾರೆ ಎಂಬ ವಿಶ್ವಾಸ ನನ್ನದಾಗಿದೆ.
ಕ್ಷೇತ್ರದಲ್ಲಿ ನನ್ನ ವಿರುದ್ಧ ನಡೆದ ಷಡ್ಯಂತ್ರ, ಅಪಪ್ರಚಾರ ಇದೀಗ ಅವೆಲ್ಲ ಮುಗಿದ ಕಥೆ ಮತದಾರರು ಏನು ತೀರ್ಪು ನೀಡಬೇಕೊ ಅದಕ್ಕೆ ಉತ್ತರ ರೂಪದಲ್ಲಿ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಚುನಾವಣ ಸಮೀಕ್ಷೆಗಳು ನಿಖರವಾಗಿರಲ್ಲ: ಸಿಎಂ
ಉಗರಗೋಳ: ಎಕ್ಸಿಟ್ ಪೋಲ್ಸ್ ಕೇವಲ ಎಕ್ಸಿಟ್ ಪೋಲ್ಸ್ ಅಷ್ಟೇ. ಅವು ನಿಖರವಾಗಿರುವುದಿಲ್ಲ. ಇಂತಹ ಸಮೀಕ್ಷೆಗಳಿಂದ ಯಾವುದೇ ಭೀತಿಯಿಲ್ಲ. ಸರಕಾರ ರಚನೆಗೆ ಬೇಕಾದ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು ಬಹುಮತದ ಸರಕಾರ ರಚನೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪತ್ನಿ ಚನ್ನಮ್ಮ ಜತೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆಗಳಿಂದ ಯಾವುದೇ ಭೀತಿಯಿಲ್ಲ. ಕಳೆದ ಬಾರಿ ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್‌ಗೆ 107, ಬಿಜೆಪಿ 80 ಸ್ಥಾನ ಎಂದು ಹೇಳಲಾಗಿತ್ತು. ಆದರೆ ಅದು ಉಲ್ಟಾ ಆಗಿತ್ತು. ನಮಗೆ 104, ಅವರಿಗೆ 80 ಸ್ಥಾನ ಬಂದಿದ್ದವು. ಉತ್ತರ ಪ್ರದೇಶದಲ್ಲಿ ಯೋಗಿ ಗೆಲ್ಲುವುದಿಲ್ಲ ಎಂದಿದ್ದರು. ಅಲ್ಲಿ ಸಂಪೂರ್ಣ ಬಹುಮತದಿಂದ ಬಿಜೆಪಿ ಗೆದ್ದು ಇತಿಹಾಸ ನಿರ್ಮಿಸಿತ್ತು ಎಂದರು.
ಅತಂತ್ರ ಸ್ಥಿತಿ ನಿರ್ಮಾಣವಾಗದು
ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಬಿಜೆಪಿಗೆ ಪ್ಲಸ್ ಆಗಿದೆ. ಯುವ ಸಮುದಾಯ ಮತ್ತು ಮಹಿಳೆಯರು ಪಕ್ಷದ ಪರ ಮತ ಚಲಾಯಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗದು ಎಂದು ಸಿಎಂ ಹೇಳಿದರು.
ನಮಗೆ 141 ಸ್ಥಾನ ಸಿಗಲಿದೆ: ಡಿ.ಕೆ. ಶಿವಕುಮಾರ್
ಕನಕಪುರ: ನಾನು ಸಮೀಕ್ಷೆಗಳನ್ನು ನಂಬುವುದಿಲ್ಲ. ನಮಗೆ 141 ಸ್ಥಾನ ಖಚಿತವಾಗಿ ಬರಲಿದ್ದು, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜನರ ಪ್ರೀತಿ, ದೇವರ ಆಶೀರ್ವಾದ ನನ್ನ ಮೇಲಿದೆ. ಮೇ 13ರ ಫಲಿತಾಂಶದಲ್ಲಿ ಗೊತ್ತಾಗಲಿದೆ. ನಮಗೆ ಪೂರ್ಣ ಬಹುಮತ ಬರುತ್ತದೆ. ಅನ್ಯ ಪಕ್ಷದ ಬೆಂಬಲ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು: ಪರಮೇಶ್ವರ್
ತುಮಕೂರು: ರಾಜ್ಯದಲ್ಲಿ ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲರ ನಿರೀಕ್ಷೆಯಂತೆ 130ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಕಾರ ರಚನೆ ಮಾಡುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ| ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
140 ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ: ಪಾಟೀಲ್
ವಿಜಯಪುರ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಶಿವ ಕುಮಾರ್ ಅವರೂ ಮುಂಚೆಯೇ ಹೇಳಿ ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 120-140 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ನಾವು ಅಧಿ ಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.