Beef: ಅಕ್ರಮ ದನದ ಮಾಂಸ ಸಾಗಿಸುತ್ತಿದ್ದವರ ಮೇಲೆ ಗುಂಪು ದಾಳಿ- ಓರ್ವ ಸಾವು
Team Udayavani, Jun 26, 2023, 6:13 PM IST
ನಾಸಿಕ್: ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ. ಕಾರಿನಲ್ಲಿದವರ ಮೇಲೆ ಭೀಕರವಾಗಿ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
ಅಕ್ರಮವಾಗಿ ದನದ ಮಾಂಸದೊಂದಿಗೆ ಕಾರಿನಲ್ಲಿ ಮುಂಬೈಗೆ ಹೊರಟಿದ್ದ ನಾಸಿರ್ ಶೇಕ್ ಮತ್ತು ಅಫಾನ್ ಅಬ್ದುಲ್ ಮಜೀದ್ ಅವರನ್ನು ಸಿನ್ನಾರ್ ಗೋಟಿ ಹೆದ್ದಾರಿಯಲ್ಲಿ ಗುಂಪೊಂದು ಕಾರನ್ನು ತಪಾಸಣೆ ಮಾಡುವ ಉದ್ದೇಶದಿಂದ ತಡೆದಿದ್ದು, ಕಾರಿನಲ್ಲಿ ಗೋ ಮಾಂಸ ಕಂಡು ಈರ್ವರ ಮೇಲೆಯೂ ಭೀಕರವಾಗಿ ಹಲ್ಲೆಗೈದಿದ್ದಾರೆ.
ಸುಮಾರು 15 ಕ್ಕೂ ಹೆಚ್ಚು ಮಂದಿಯಿದ್ದ ತಂಡವು ಕಬ್ಬಿಣದ ರಾಡ್, ದೊಣ್ಣೆಗಳಿಂದ ಇಬ್ಬರ ಮೇಲೆ ದಾರುಣವಾಗಿ ಹಲ್ಲೆಗೈದಿದೆ. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಫಾನ್ ಅಬ್ದುಲ್ ಮಜೀದ್ ಸಾವನ್ನಪ್ಪಿದ್ದಾನೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ʼಬಸ್ತಾರ್ʼ ಮೂಲಕ ಮತ್ತೊಂದು ಸತ್ಯ ಘಟನೆಯ ಕಥೆ ಹೇಳಲು ಹೊರಟ ʼದಿ ಕೇರಳ ಸ್ಟೋರಿʼ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.