ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Team Udayavani, Apr 25, 2024, 1:43 AM IST

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ಅವರು ತಮ್ಮ ಚುನಾವಣೆ ಪ್ರಚಾರದ ಕೊನೆಯಲ್ಲಿ ಬಿಜೈ ಬಳಿಯಲ್ಲಿರುವ ಮಾಜಿ ರಕ್ಷಣ ಸಚಿವ ದಿ| ಜಾರ್ಜ್‌ ಫೆರ್ನಾಂಡಿಸ್‌ ಅವರ ಸಮಾಧಿಗೆ ನಮನ ಸಲ್ಲಿಸಿದರು.

ಜಾರ್ಜ್‌ ಫೆರ್ನಾಂಡಿಸ್‌ ನನಗೆ ದೊಡ್ಡ ಮಟ್ಟದ ಸ್ಫೂರ್ತಿ, ಅವರ ಆದರ್ಶಗಳನ್ನು ಮುಂದಿಟ್ಟು ರಾಜಕಾರಣದಲ್ಲಿ ಇರಬೇಕೆಂದು ಬಯಸಿದ್ದೇನೆ. 2000ನೇ ಇಸವಿಯಲ್ಲಿ 50ನೇ ಗಣರಾಜ್ಯೋತ್ಸವ ಪರೇಡ್‌ ಸಂದರ್ಭದಲ್ಲಿ ದಿಲ್ಲಿಯಲ್ಲಿ ಎನ್‌ಸಿಸಿ ಕೆಡೆಟ್‌ ಆಗಿ ಪಾಲ್ಗೊಂಡಿದ್ದೆ. ಅಂದಿನ ಪ್ರಧಾನಿ ವಾಜಪೇಯಿ ಮತ್ತು ರಕ್ಷಣ ಸಚಿವ ಜಾರ್ಜ್‌ ಅವರನ್ನು ಹತ್ತಿರದಿಂದ ಕಂಡಿದ್ದೆ. ಅದೇ ನನಗೆ ಮುಂದೆ ದೇಶ ಸೇವೆಗೆ ಮತ್ತು ಸಮಾಜ ಸೇವೆಗೆ ಸ್ಫೂರ್ತಿ ನೀಡಿತ್ತು ಎಂದು ಕ್ಯಾ| ಚೌಟ ಸ್ಮರಿಸಿದರು.

ಮಂಗಳೂರಿನಲ್ಲಿ ಹುಟ್ಟಿ ಬೆಳೆದು ಮುಂಬಯಿ, ಬಿಹಾರದಲ್ಲಿ ರಾಜಕೀಯ ಜೀವನ ನಡೆಸಿದ ಜಾರ್ಜ್‌ ಫೆರ್ನಾಂಡಿಸ್‌ ನಮಗೆಲ್ಲ ಆದರ್ಶ ಪ್ರಾಯರು. ತಮ್ಮದೇ ಕನಸಿನಂತೆ ಕೊಂಕಣ ರೈಲ್ವೇಯನ್ನು ಅಭಿವೃದ್ಧಿ ಪಡಿಸಿದ್ದು ಜಾರ್ಜ್‌ ಫೆರ್ನಾಂಡಿಸ್‌ ಹೆಗ್ಗಳಿಕೆ. ಅವರು ತುಳುನಾಡಿನ ಹೆಮ್ಮೆ. ಸರಳತೆಯ ಸಾಕಾರಮೂರ್ತಿಯಾಗಿದ್ದ ಜಾರ್ಜ್‌ ತುಳುನಾಡಿನ ಹೆಮ್ಮೆಯ ಮಗ. ದ. ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ದೊಡ್ಡದಿದೆ. ಜಾರ್ಜ್‌ ಸವೆಸಿದ ಹಾದಿ ಯಲ್ಲೇ ಮುನ್ನಡೆಯುತ್ತೇನೆ. ಅವರ ಸರಳತೆ, ದೂರದೃಷ್ಟಿ ಆದರ್ಶ ಎಂದರು.

ಅಭ್ಯರ್ಥಿ ಘೋಷಣೆಯಾದ ಕೂಡಲೇ ಕದ್ರಿಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದೆ. ಅಲ್ಲಿಂದಲೇ ಪ್ರಚಾರ ಆರಂಭಿಸಿದ್ದೆ. ಈಗ ಜಾರ್ಜ್‌ ಅವರ ಸಮಾಧಿಗೆ ನಮಿಸಿ, ಅವರ ರೀತಿಯಲ್ಲೇ ನಡೆಯುತ್ತೇನೆ ಎಂದು ಹೇಳಿ ಪ್ರಚಾರ ಕೊನೆಗೊಳಿಸುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣ ಪ್ರಭಾರಿ ಕ್ಯಾ| ಗಣೇಶ್‌ ಕಾರ್ಣಿಕ್‌, ಜಗದೀಶ್‌ ಶೇಣವ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

police crime

Crime-follow up;ಇ.ಡಿ. ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆ: 4 ತಂಡಗಳಿಂದ ತನಿಖೆ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.