ಮಮತಾ ಬ್ಯಾನರ್ಜಿಗೆ ಬಹುಪರಾಕ್; ಕಾಂಗ್ರೆಸ್ ಪಕ್ಷ ತೊರೆದ ಹಿರಿಯ ಮುಖಂಡ ಫಲೈರೋ
ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ಫಲೈರೋ, ನಾನು ಕಾಂಗ್ರೆಸ್ ವ್ಯಕ್ತಿಯಾಗಿ ಮುಂದುವರಿಯುತ್ತೇನೆ.
Team Udayavani, Sep 27, 2021, 2:50 PM IST
ಪಣಜಿ: ಗೋವಾದ ಕಾಂಗ್ರೆಸ್ ಹಿರಿಯ ಮುಖಂಡ ಲೂಯಿನ್ಹೊ ಫಲೈರೋ ಸೋಮವಾರ(ಸೆಪ್ಟೆಂಬರ್ 27) ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಬಹುಮಹಡಿ ಕಟ್ಟಡ ಸುರಕ್ಷಿತವೇ?
ನಾವೆಲಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಸುದ್ದಿಗಾರರ ಜತೆ ಮಾತನಾಡುತ್ತ, ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಲು ಕಾರಣವನ್ನು ತಿಳಿಸಿದರು. ನಾನು ಸ್ವಚ್ಛ ಕಾಂಗ್ರೆಸ್ ಮನುಷ್ಯನಾಗಿದ್ದೆ. ಆದರೆ ಸದ್ಯ ರಾಜ್ಯದಲ್ಲಿ ಬಿಜೆಪಿ ಜನತೆಯ ಅವಹೇಳನವನ್ನು ನಡೆಸುತ್ತಿದೆ. ಬಿಜೆಪಿಯನ್ನು ತಡೆಯುವ ಅಗತ್ಯವಿದ್ದು, ಈ ಕೆಲಸವನ್ನು ತೃಣಮೂಲ ಕಾಂಗ್ರೆಸ್ ಮಾತ್ರ ಮಾಡಲು ಸಾಧ್ಯ ಎಂದರು.
ಸುಮಾರು 40 ವರ್ಷಗಳ ಕಾಲ ಗೋವಾ ಕಾಂಗ್ರೆಸ್ ಪಕ್ಷದಲ್ಲಿದ್ದ ಫಲೈರೋ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಹೊಗಳಿದ್ದು, ಭಾರತೀಯ ಜನತಾ ಪಕ್ಷಕ್ಕೆ ಕಠಿಣ ಸ್ಪರ್ಧೆಯೊಡ್ಡಲು ಮಮತಾ ಬ್ಯಾನರ್ಜಿಯಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ನರೇಂದ್ರ ಮೋದಿ ಅವರಿಗೆ ತೀವ್ರ ಹೋರಾಟ ನೀಡಿದ್ದು, ಈ ಕಾರಣದಿಂದಾಗಿಯೇ ಪಶ್ಚಿಮಬಂಗಾಳದಲ್ಲಿ ಟಿಎಂಸಿ ಪಕ್ಷ ಗೆಲುವು ಸಾಧಿಸಿದೆ ಎಂದು ಲೂಯಿನ್ಹೊ ಫಲೈರೋ ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಇದೇ ದೇಶದಲ್ಲಿನ ನಿಜವಾದ ಕಾಂಗ್ರೆಸ್ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದ ಬಳಿ ಬಿಜೆಪಿಯ ವಿರುದ್ಧ ಹೋರಾಡುವ ಶಕ್ತಿ ಉಳಿದುಕೊಂಡಿಲ್ಲ. ಆದರೆ ಈ ಕೆಲಸವನ್ನು ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಮಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಲೂಯಿನ್ಹೊ ಫಲೈರೋ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.