ಹೊಸ ವರ್ಷ: ಗೋವಾದಲ್ಲಿ ಪಾರ್ಟಿಗಳಿಗೆ ಅವಕಾಶವಿದೆ ಎಂದ ಸಿಎಂ
Team Udayavani, Dec 29, 2021, 3:45 PM IST
ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಗೋವಾದಲ್ಲಿ ನೈಟ್ ಕರ್ಫ್ಯೂ ಕುರಿತ ಚರ್ಚೆಗೆ ಕೊನೆಗೂ ಅಂತ್ಯ ಹಾಡಿದ್ದು, ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೊಸ ವರ್ಷ ಸಂದರ್ಭದಲ್ಲಿ ಪಾರ್ಟಿಗಳಿಗೆ ಅವಕಾಶವಿದೆ ಎಂದು ಘೋಷಿಸಿದ್ದು, ಕೆಲ ಷರತ್ತುಗಳನ್ನು ವಿಧಿಸಿದ್ದಾರೆ.
ಗೋವಾದ ಹಲವೆಡೆ ಹೊಸ ವರ್ಷದ ಪಾರ್ಟಿಗಳನ್ನು ಆಯೋಜಿಸಲಾಗಿದ್ದು ನಿಯಮಗಳ ಉಲ್ಲಂಘನೆಯಾಗಬಾರದು. ಪಾರ್ಟಿ ಆಯೋಜಕರಿಗೆ ಸರ್ಕಾರ ಯಾವುದೇ ನಿರ್ಬಂಧ ಹೇರಿಲ್ಲ. ಆದರೆ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಮಾತ್ರ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಕೋವಿಡ್ ಎರಡೂ ಡೋಸ್ ಲಸಿಕೆ ಪಡೆದವರು ಮತ್ತು ಕೋವಿಡ್ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ಪಾರ್ಟಿಗೆ ಪ್ರವೇಶ ನೀಡಲು ಸರ್ಕಾರ ಸ್ಪಷ್ಠ ಸೂಚನೆ ನೀಡಿದೆ.
ಹೊಸ ವರ್ಷದ ಪಾರ್ಟಿಗಳಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೂಚಿಸಿದ್ದಾರೆ. ಪಾರ್ಟಿ ನಡೆಯುವ ಸ್ಥಳದಲ್ಲಿ ಪೋಲಿಸರು ಕಟ್ಟೆಚ್ಚರ ವಹಿಸಲಿದ್ದು ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಗೋವಾದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ಯಾವುದೇ ವಿಚಾರವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ಗೋವಾದಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ ಬಾಲಕನೋರ್ವನಿಗೆ ಕರೋನಾ ರೂಪಾಂತರಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಗೋವಾದಲ್ಲಿ ಕೋವಿಡ್ ಪಾಸಿಟಿವಿಟಿ ದರ ಪ್ರತಿದಿನ ಏರಿಕೆಯಾಗುತ್ತಲೇ ಇದೆ. ತಜ್ಞರ ಸೂಚನೆಯ ನಂತರವೂ ರಾಜ್ಯ ಸರ್ಕಾರವು ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸದಿರುವುದು ರಾಜ್ಯದಲ್ಲಿ ಕರೋನಾ ಸೋಂಕು ಹರಡುವ ಭೀತಿ ಎದುರಾಗುವಂತಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.