ಗೋವಾ: ದಿ ಕಾಶ್ಮೀರ್ ಫೈಲ್ಸ್” ಪೋಸ್ಟರ್ ಹಾಕಲಿಲ್ಲ ಎಂದು ಸಿಬ್ಬಂದಿಗಳಿಗೆ ಥಳಿತ
45 ಜನರ ವಿರುದ್ಧ ಕೇಸ್ , ರಾಜಕೀಯ ಸ್ವರೂಪ ಪಡೆದ ಪ್ರಕರಣ
Team Udayavani, Mar 14, 2022, 4:29 PM IST
ಪಣಜಿ: ಚಿತ್ರಮಂದಿರದ ಎದುರು “ದಿ ಕಾಶ್ಮೀರ್ ಫೈಲ್ಸ್ ” ಚಲನಚಿತ್ರದ ಪೋಸ್ಟರ್ ಹಾಕಲಿಲ್ಲ ಎಂಬ ಕಾರಣಕ್ಕೆ ಮಡಗಾಂವ್ ನ ಐನೊಕ್ಸ್ ಚಿತ್ರಮಂದಿರದ ಕರ್ಮಚಾರಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ 45 ಜನರ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಈ ಚಲನಚಿತ್ರ ಪ್ರದರ್ಶನವನ್ನು ನಿಲ್ಲಿಸಬಾರದು ಎಂದು ಖುದ್ದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರೇ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಇದರಿಂದಾಗಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುವಂತಾಗಿದೆ.
45 ಜನ ಅಪರಿಚಿತರು ಜಮಾಯಿಸಿ ಥಿಯೇಟರ್ ಸಿಬ್ಬಂದಿಗಳಿಗೆ ಥಳಿಸಿದ್ದಾರೆ ಎಂದು ಐನೊಕ್ಸ್ ಚಿತ್ರಮಂದಿರದ ಮ್ಯಾನೇಜರ್ ಜೋಸೆಫ್ ಪಿರೇರಾ ಮಡಗಾಂವ್ ಫತೊರ್ಡಾ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಎಲ್ಲ ಜನರಿಗೂ ತಿಳಿಯಬೇಕು ಎಂದು ಈ ಚಲನಚಿತ್ರ ಪ್ರದರ್ಶನವನ್ನು ಮುಂದುವರೆಸುವಂತೆ ಐನೊಕ್ಸ್ ಆಡಳಿತ ಮಂಡಳಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಟ್ವೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೆಯೇ ಮುಂದೆ ಇಂತಹ ದಾಳಿಗಳು ನಡೆಯದಿರಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.