ರಾಜ್ಯದಲ್ಲಿ ಸರಕಾರಿ ಜುವೆಲರಿ ಮಳಿಗೆ: ಮುರುಗೇಶ್ ನಿರಾಣಿ
Team Udayavani, Mar 19, 2021, 1:29 AM IST
ಬೆಂಗಳೂರು: ದೇಶದಲ್ಲೇ ಚಿನ್ನ ಉತ್ಪಾದಿಸುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕವು ಈಗ ಖಾಸಗಿ ಕಂಪೆನಿಗಳ ಸಹ ಭಾಗಿತ್ವದಲ್ಲಿ ಸರಕಾರಿ ಒಡೆತನದಲ್ಲಿ ಆಭರಣ ಮಳಿಗೆ ತೆರೆಯಲು ನಿರ್ಧರಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನೂತನ ಯೋಜನೆಗಳ ಮೂಲಕ ಇಲಾಖೆಯನ್ನು ಜನಸಾಮಾನ್ಯರತ್ತ ಕೊಂಡೊಯ್ಯಲು ತೀರ್ಮಾನಿಸ ಲಾಗಿದೆ. ಮೊದಲ ಬಾರಿಗೆ ಹಾಗೂ ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಸರಕಾರಿ ಒಡೆತನದ ಆಭರಣಗಳ ಮಳಿಗೆ ರಾಜ್ಯದಲ್ಲಿ ಸದ್ಯದಲ್ಲೇ ತಲೆ ಎತ್ತಲಿದೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ (ಟಯರ್ 1) ಈ ಮಳಿಗೆಗಳು ಕಾರ್ಯಾರಂಭ ಮಾಡಲಿದೆ. ರಾಜ್ಯದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ಯವಾದರೆ, ಮುಂದಿನ ದಿನಗಳಲ್ಲಿ ಹೊರರಾಜ್ಯಗಳಲ್ಲೂ ಮಳಿಗೆಗಳನ್ನು ತೆರೆಯುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ ಎಂದು ಹೇಳಿದರು.
ಚಿನ್ನದ ನಾಣ್ಯ ಬಿಡುಗಡೆ
ಮದುವೆ ಮುಂತಾದ ಶುಭ ಕಾರ್ಯಕ್ರಮಗಳಲ್ಲಿ ಗ್ರಾಹಕರಿಗೆ ಉಡುಗೊರೆಯಾಗಿ ನೀಡಲು ಅನುಕೂಲವಾಗುವಂತೆ ಇನ್ನು ಮುಂದೆ ಕರ್ನಾಟಕದ ಲಾಂಛನವಾದ ಗಂಡುಭೇರುಂಡ ಗುರುತಿನ ಚಿನ್ನದ ನಾಣ್ಯಗಳನ್ನು ಹೊರತರಲು ಇಲಾಖೆ ತೀರ್ಮಾನಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.