Karnataka: ಸರಕಾರ ಜಾತಿಗಣತಿ ವರದಿಯನ್ನು ಸ್ವೀಕರಿಸಲಿದೆ : ಸಿಎಂ
ಮತ್ತೆ ಮುನ್ನೆಲೆಗೆ ಬಂದ ಜಾತಿ ಜನಗಣತಿ-ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ಧಾಳಿ
Team Udayavani, Jul 3, 2023, 7:23 AM IST
ಬೆಂಗಳೂರು: ಜಾತಿ ಜನಗಣತಿ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅಲ್ಲದೆ ಇದೇ ವಿಚಾರವಾಗಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಸಮಾಜದ ತಾರತಮ್ಯ ನಿವಾರಣೆಗೆ ಜಾತಿ ಗಣತಿ ಮತ್ತು ಅಧ್ಯಯನಗಳು ಅಗತ್ಯ. ಆ ಹಿನ್ನೆಲೆಯಲ್ಲಿ ನಮ್ಮ ಸರಕಾರ ಜಾತಿಗಣತಿ ವರದಿಯನ್ನು ಸ್ವೀಕರಿಸಲಿದೆ ಎಂದು ಹೇಳಿದ್ದಾರೆ.
ರವಿವಾರ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರಕಾರದ ಅವಧಿಯಲ್ಲಿ ಜಾತಿ ಜನಗಣತಿ ಪಡೆಯಲು ಹೇಳಿದ್ದೆ. ಆದರೆ ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಸಚಿವ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಹೇಳಿದರು.
ಐದೂ ಗ್ಯಾರಂಟಿಗೆ ಬಜೆಟ್‌ನಲ್ಲಿ ಹಣ
ಎಷ್ಟೇ ಕಷ್ಟ ಬಂದರೂ ನಾವು ಚುನಾವಣೆ ವೇಳೆ ನೀಡಿರುವ ಐದೂ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್‌ನಲ್ಲೇ ಎಲ್ಲ ಗ್ಯಾರಂಟಿಗಳಿಗೆ ಹಣ ನೀಡುತ್ತೇವೆ. ಎಲ್ಲ ಘೋಷಣೆಗಳೂ ಜಾತಿ-ಧರ್ಮ ಮೀರಿದವು. ಸರ್ವ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗೆ ಈ ಐದು ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಹೇಳಿದರು.
ಸಮಾಜಮುಖೀ ಕಾರ್ಯ
ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಗ್ಗೂಡಿಸಿ ಕಾಗಿನೆಲೆ ಮಹಾ ಸಂಸ್ಥಾನಕ್ಕೆ ನಾಂದಿ ಹಾಡಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಯಶಸ್ವಿಯಾಗಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿರುವ ಪೀಠ ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖೀಯಾಗಿ ನಡೆಯುತ್ತಿದೆ ಎಂದು ಶ್ಲಾ ಸಿದರು.
ಶೋಷಿತ ಸಮಾಜದ ಮಹಾ ಸಂಸ್ಥಾನ
ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಸಿದ್ದರಾಮಯ್ಯ ಬಣ್ಣಿಸಿದರು.
ಸಮಾರಂಭದಲ್ಲಿ ಶಾಖಾ ಮಠದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಚಿವರಾದ ಬೈರತಿ ಸುರೇಶ್, ಶಾಸಕ ಎಸ್.ಟಿ.ಸೋಮಶೇಖರ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಕೆ.ಎಸ್.ಈಶ್ವರಪ್ಪ, ಬಂಡೆಪ್ಪ ಕಾಶಂಪೂರ್, ಮಾಜಿ ಸಚಿವ ಎಚ್.ವಿಶ್ವನಾಥ, ಕೊಪ್ಪಳ ವಿವಿ ಕುಲಪತಿ ಬಿ.ಕೆ.ರವಿ ಮತ್ತಿತರರು ಉಪಸ್ಥಿತರಿದ್ದರು.
ಸಿದ್ದು ಆಡಳಿತಕ್ಕೆ ಸೋಮಶೇಖರ್ ಮೆಚ್ಚುಗೆ
ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸರಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲ ನೆರವನ್ನೂ ನೀಡುತ್ತೇನೆ ಎಂದು ಹೇಳಿದರು.
ಸರಕಾರದ ಅನುದಾನ ಕೇಳುವುದಿಲ್ಲ
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಮಾತನಾಡಿ, ಶಾಖಾ ಮಠದ ನಿರ್ಮಾಣಕ್ಕೆ ನಾವು ಸರಕಾರದ ಅನುದಾನ ಕೇಳುವುದಿಲ್ಲ, ಸಮಾಜದ ಬೆವರು ಮತ್ತು ಶ್ರಮ ಸಾಕು ಎಂದರು. ಈ ವೇಳೆ ಸಚಿವ ಭೈರತಿ ಸುರೇಶ್ ಅವರು ಶ್ರೀಮಠದ ನಿರ್ಮಾಣಕ್ಕೆ ವೈಯುಕ್ತಿಕವಾಗಿ 50 ಲಕ್ಷ ರೂ.ಗಳ ಅನುದಾನ ನೀಡುವುದಾಗಿ ಹೇಳಿದರು. ಹಲವರು ತಮ್ಮ ತಮ್ಮ ಶಕ್ತಿಯಾನುಸಾರ 50 ಸಾವಿರ ರೂ.ದಿಂದ 25 ಲಕ್ಷ ರೂ.ವರೆಗೂ ನೆರವನ್ನು ಘೋಷಿಸಿದರು.
ಮತ್ತೆ ಚುನಾವಣೆಗೆ ಸ್ಪರ್ಧಿಸಲಾರೆ: ಸಿದ್ದು
ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪಸಂಖ್ಯಾಕ ಸಮುದಾಯಗಳ ಎಲ್ಲ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ಹೋರಾಟ ಮಾಡಿಯೇ ಮಾಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.