ಕೊಲ್ಲೂರು, ಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ, ವಿಶೇಷ ಪ್ರಾರ್ಥನೆ
Team Udayavani, Dec 3, 2021, 12:11 PM IST
ಉಡುಪಿ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪೂರ್ಣಕುಂಭ ಸ್ವಾಗತ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಗೌರವಾನ್ವಿತ ರಾಜ್ಯಪಾಲರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿ, ಅರ್ಚನೆ ಮಾಡಿಸಿದರು ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯ ಪ್ರದಕ್ಷಿಣೆ ಮಾಡಿದ ರಾಜ್ಯಪಾಲರು ದೇವರ ಚಿನ್ನದ ರಥ ವೀಕ್ಷಿಸಿದರು.
ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ,ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ , ಎಎಸ್ಪಿ ಕುಮಾರ ಚಂದ್ರ , ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ ಪೀಠಾಧಿಪತಿಗಳಾದ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹಿಸಿದರು. ಈ ವೇಳೆ ಶಾಸಕ ಕೆ.ರಘುಪತಿ ಭಟ್ ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.