ಹುಂಬರಿಂದ ಪ್ರಚೋದಿಸುವ ಕೆಲಸ: ಗೋವಿಂದ ಕಾರಜೋಳ
Team Udayavani, Dec 14, 2022, 10:29 PM IST
ಬೆಂಗಳೂರು: ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, “ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ ಪಾರ್ಲಿಮೆಂಟ್ನಲ್ಲಿ ಪಾಸ್ ಆದ ಮೇಲೆ ಅದು ಎಲ್ಲರಿಗೂ ಅನ್ವಯವಾಗುತ್ತದೆ. ಆದರೆ, ಕಾನೂನು ಮತ್ತು ವ್ಯವಹಾರ ಜ್ಞಾನವಿಲ್ಲದ ಕೆಲ ಹುಂಬರು ಹಾಗೂ ಪುಂಡರು ಮುಂಬೈನಲ್ಲಿ ಕುಳಿತು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳು ಕಟುವಾಗಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಗಳ ಪುನರ್ ವಿಂಗಡಣಾ ಕಾಯ್ದೆ ಒಪ್ಪಿದ ಮೇಲೆ ಸೌಹಾರ್ದತೆಯಿಂದ ಬದುಕುವುದು ಎಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಇದು ಮಹಾರಾಷ್ಟ್ರ ಮತ್ತು ಕರ್ನಾಟಕ ಎರಡಕ್ಕೂ ಅನ್ವಯವಾಗುತ್ತದೆ. ಹೀಗಿದ್ದೂ ಮಹಾರಾಷ್ಟ್ರ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದೆ. ಇದು ಅವರ ಮನಸ್ಥಿತಿ ಸರಿಯಲ್ಲ ಮತ್ತು ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಪದೇ ಪದೇ ಕೆಲವರು ನಾಟಕ ಮಾಡುತ್ತಾರೆ. ಈ ಹುಂಬತನ ಮತ್ತು ಪ್ರಚೋದನೆ ಸಂವಿಧಾನವಿರೋಧಿ ಎಂದರು.
ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಅಲ್ಲಿನ ಜನ ಯಾರೂ ಹೇಳುತ್ತಿಲ್ಲ. ಮುಂಬೈನಲ್ಲಿ ಕುಳಿತ ಕೆಲ ಪುಂಡರು ಆ ಕೆಲಸ ಮಾಡುತ್ತಿದ್ದಾರೆ ಎಂದು ಕಾರಜೋಳ ತೀಕ್ಷ್ಣಣವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.