ಭದ್ರಾ ಮೇಲ್ದಂಡೆಗೆ ಮುಂದಿನ ಸಂಪುಟದಲ್ಲಿ ಅನುಮೋದನೆ?
Team Udayavani, Dec 13, 2022, 9:54 AM IST
ನವದೆಹಲಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿರುವ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
ಇದನ್ನೂ ಓದಿ:ಇಶಾಂತ್, ರಹಾನೆಗಿಲ್ಲ ಸೆಂಟ್ರಲ್ ಕಾಂಟ್ರಾಕ್ಟ್: ಪಾಂಡ್ಯ, ಸೂರ್ಯ, ಗಿಲ್ ಗೆ ಬಡ್ತಿ ಸಾಧ್ಯತೆ
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಗೋವಿಂದ ಕಾರಜೋಳ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.