ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಬಂದರಷ್ಟೇ ವೇತನ: ನೌಕರರಿಗೆ ಮಣಿಪುರ ಸರ್ಕಾರ ಎಚ್ಚರಿಕೆ
Team Udayavani, Jun 28, 2023, 7:22 AM IST
ಇಂಫಾಲ್: ಮಣಿಪುರದಲ್ಲಿನ ಹಿಂಸಾಚಾರದ ಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸವನ್ನು ಉಡಾಫೆಯಾಗಿ ತೆಗೆದುಕೊಳ್ಳುವ ಅಧಿಕಾರಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಸರ್ಕಾರ ಎಚ್ಚರಿಕೆ ನೀಡಿದೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು ಕಚೇರಿಗೆ ಬಂದು ಕೆಲಸ ಮಾಡಿದರೆ ಮಾತ್ರವೇ ವೇತನ ನೀಡಲಾಗುತ್ತದೆ. ಇಲ್ಲದಿದ್ದಲ್ಲಿ ವೇತನ ಕಡಿತಗೊಳಿಸುವುದಾಗಿ ಮುನ್ನೆಚ್ಚರಿಕೆ ನೀಡಲಾಗಿದೆ. ಸರ್ಕಾರದ ವಿವಿಧ ಸಚಿವಾಲಯಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳಲ್ಲಿ ರಾಜ್ಯದ ಪರಿಸ್ಥಿತಿಯ ನೆಪ ನೀಡಿ ಕೆಲಸಕ್ಕೆ ಹಾಜರಾಗದವರ ಪಟ್ಟಿಯನ್ನು ನೀಡುವಂತೆ ಕೇಳಲಾಗಿದೆ. ಜತೆಗೆ ಅಂಥ ಉದ್ಯೋಗಿಗಳ ಹೆಸರು, ಕಾರ್ಯನಿರ್ವಹಿಸುತ್ತಿರುವ ವಿಭಾಗ, ಹುದ್ದೆ ಎಲ್ಲ ಮಾಹಿತಿಯನ್ನೂ ಉಲ್ಲೇಖೀಸಿ, ಬಳಿಕ ಪಟ್ಟಿಯನ್ನು ಪ್ರಸ್ತುತ ಪಡಿಸುವಂತೆ ಸೂಚಿಸಲಾಗಿದೆ.
ರಾಜ್ಯದ 1 ಲಕ್ಷಕ್ಕೂ ಅಧಿಕ ಸರ್ಕಾರಿ ಕೆಲಸಗಾರರಿಗೆ ಅಧಿಕೃತ ರಜೆಯನ್ನು ಹೊರತುಪಡಿಸಿ, ಯಾವುದೇ ರಜೆಗಳನ್ನು ಪಡೆದುಕೊಂಡರೆ ಅದಕ್ಕೆ ವೇತನ ನೀಡಲಾಗುವುದಿಲ್ಲವೆಂಬುದನ್ನು ಸ್ಪಷ್ಟಪಡಿಸುವಂತೆಯೂ ಸಾಮಾನ್ಯ ಆಡಳಿತ ವಿಭಾಗ ಇಲಾಖೆಗಳಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.