ಟಿಕೆಟ್‌ ಆಕಾಂಕ್ಷಿಗಳಿಗೆ ಗ್ರಾಮ ವಾಸ್ತವ್ಯ ಟಾಸ್ಕ್

ಜೆಡಿಎಸ್‌ನಿಂದ ಮೂರು ತಿಂಗಳ ಪರೀಕ್ಷೆ; ಹಾಲಿ ಶಾಸಕರಿಗೆ ಕೂಡ ಇದು ಅನ್ವಯ

Team Udayavani, Jan 30, 2023, 7:20 AM IST

ಟಿಕೆಟ್‌ ಆಕಾಂಕ್ಷಿಗಳಿಗೆ ಗ್ರಾಮ ವಾಸ್ತವ್ಯ ಟಾಸ್ಕ್

ಬೆಂಗಳೂರು: ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ-ಕಾಂಗ್ರೆಸ್‌ಗೆ ಟಕ್ಕರ್‌ ನೀಡಲು “ಪಂಚರತ್ನ ಯಾತ್ರೆ’ ನಡೆಸುತ್ತಿರುವ ಜೆಡಿಎಸ್‌, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರೀತಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ತನ್ನ ಹಾಲಿ ಶಾಸಕರು, ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳಿಗೆ ಮೂರು ತಿಂಗಳ “ಚುನಾವಣಾ ಟಾಸ್ಕ್’ ನೀಡಿದೆ.

ಹಾಲಿ ಜೆಡಿಎಸ್‌ ಶಾಸಕರು ಸೇರಿದಂತೆ ಮೊದಲ ಹಂತದಲ್ಲಿ ಟಿಕೆಟ್‌ ಘೋಷಣೆಯಾಗಿರುವ 93 ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಇನ್ನೂ ಟಿಕೆಟ್‌ ಘೋಷಣೆಯಾಗಬೇಕಿರುವ ಕ್ಷೇತ್ರಗಳ ಆಕಾಂಕ್ಷಿಗಳಿಗೆ ತಮ್ಮ ಕ್ಷೇತ್ರದಲ್ಲಿ ಗ್ರಾಮ ಪಾದಯಾತ್ರೆ, ಗ್ರಾಮ ಸಭೆ ಮತ್ತು ಗ್ರಾಮ ವಾಸ್ತವ್ಯ ಮಾಡುವಂತೆ ಸೂಚನೆ ನೀಡಲಾಗಿದ್ದು, ಈ ವಿಚಾರವಾಗಿ ಎಲ್ಲಾ ಶಾಸಕರು, ಅಭ್ಯರ್ಥಿ ಮತ್ತು ಆಕಾಂಕ್ಷಿಗಳಿಗೆ ಖುದ್ದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹೀಂ ಜಂಟಿ ಪತ್ರ ಬರೆದಿದ್ದಾರೆ.

“ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಏನೇ ಅಬ್ಬರ, ಎಷ್ಟೇ ಅರ್ಭಟ ಮಾಡಿದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ನಿಯತ್ತಿನಿಂದ ನಿಮ್ಮ ಕೆಲಸ ನೀಡುವ ಮಾಡಿಕೊಂಡು ಹೋಗಿ. ಕ್ಷೇತ್ರದಲ್ಲಿ ಪಕ್ಷಕ್ಕಿರುವ ಪ್ರಾಬಲ್ಯ ಮತ್ತು ನಿಮ್ಮ ಹಿಡಿತವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬೇಡಿ. ಪಂಚರತ್ನ ಯಾತ್ರೆ ಆಧಾರವಾಗಿಟ್ಟುಕೊಂಡು ಕ್ಷೇತ್ರದಲ್ಲಿ ಸಂಚಾರ ನಡೆಸಿ ಜೆಡಿಎಸ್‌ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಅಧಿಕಾರಕ್ಕೆ ಬಂದರೆ ಮಾಡುವ ಕೆಲಸಗಳ ಬಗ್ಗೆ ನೀಡಿರುವ ಭರವಸೆಗಳನ್ನು ಜನರ ಮುಂದಿಡಿ’ ಎಂದು ಸೂಚಿಸಲಾಗಿದೆ.

ಪ್ರತ್ಯೇಕ ವಾರ್‌ ರೂಂ
ಮೂರು ತಿಂಗಳ ಚುನಾವಣಾ ಟಾಸ್ಕ್ ಬಗ್ಗೆ ಮೇಲ್ವಿಚಾರಣೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲು ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ಟಾಸ್ಕ್ ರೂಂ ಸ್ಥಾಪಿಸಲಾಗಿದೆ. ಈ ಚುನಾವಣಾ ಟಾಸ್ಕ್ ನಿರ್ವಹಿಸಲು ಎರಡು ಖಾಸಗಿ ಏಜೆನ್ಸಿಗಳನ್ನು ನೇಮಿಸಲಾಗಿದ್ದು, ಇದರ ಮೇಲ್ವಿಚಾರಣೆಯನ್ನು ಖುದ್ದು ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ ಅವರೇ ವಹಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಈ ಮೊದಲೇ ಈ ಟಾಸ್ಕ್ ಪೂರ್ಣಗೊಳಿಸುವ ಗುರಿಯನ್ನು ಶಾಸಕರು, ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕನಿಷ್ಠ 2 ದಿನಗಳ ಗ್ರಾಮ ವಾಸ್ತವ್ಯ
ಕ್ಷೇತ್ರದ ಮತದಾರರಲ್ಲಿ ಜೆಡಿಎಸ್‌ ಪಕ್ಷದ ಬಗ್ಗೆ ಮೂಡಿರುವ ಅಭಿಪ್ರಾಯ, ಅಭಿಲಾಷೆ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ, ನೀವು ನಿಮ್ಮ ವಿಧಾನಸಭಾ ಕ್ಷೇತ್ರದ ಉದ್ದಗಲಕ್ಕೂ ಪಾದಯಾತ್ರೆ ಕೈಗೊಂಡು ಪ್ರತಿ ಗ್ರಾ.ಪಂ.ನಲ್ಲಿ ಕನಿಷ್ಠ 2 ದಿನಗಳ ಗ್ರಾಮ ವಾಸ್ತವ್ಯ ಹೂಡಿ, ಗ್ರಾಮ ಸಭೆಗಳನ್ನು ನಡೆಸಿ ಪಂಚರತ್ನ ಯೋಜನೆಯ ರೂಪ-ರೇಷೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಇದಕ್ಕಾಗಿ ಹೋಬಳಿವಾರು, ಗ್ರಾಮ ಪಂಚಾಯಿತಿವಾರು ಹಳ್ಳಿಗಳಲ್ಲಿ ಮುಂದಿನ 2-3 ತಿಂಗಳ ಮಟ್ಟಿಗೆ ವಿವರವಾದ ಕಾರ್ಯಕ್ರಮವನ್ನು ತಯಾರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರು ಸಹಕಾರ ನೀಡುವಂತೆ ಸೂಚನೆ ಕೊಡಲಾಗಿದೆ.

ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ಶಾಸಕರು, ಭಾವಿ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಎಲ್ಲಾ ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರು ಮತ್ತು ಇತರ ಮುಖಂಡರು, ಕಾರ್ಯಕರ್ತರು ಎಲ್ಲಾ ವರ್ಗದ ಪ್ರಮುಖರೊಂದಿಗೆ ಬೆರೆತು ಅವರ ವಿಶ್ವಾಸ, ಸಹಕಾರ, ಬೆಂಬಲ ಪಡೆದು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು. ವಿಶೇಷವಾಗಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಬಗ್ಗೆ ಗಮನಹರಿಸಬೇಕು. ಈ ವರ್ಗಗಳು ಜೆಡಿಎಸ್‌ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಅಪನಂಬಿಕೆಗಳು ಇದ್ದರೆ ಅವುಗಳನ್ನು ನಿವಾರಿಸುವ ಕೆಲಸ ಆಗಬೇಕು ಎಂದು ತಾಕೀತು ಮಾಡಲಾಗಿದೆ.

ಶಾಸಕರು, ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳಿಗೆ ಮೂರು ತಿಂಗಳ ಚುನಾವಣಾ ಟಾಸ್ಕ್ ನೀಡಲಾಗಿದೆ. ಈಗಾಗಲೇ ಪ್ರಾಥಮಿಕ ಹಂತದ ಕೆಲಸ ಆರಂಭವಾಗಿದೆ. ಕುಮಾರಸ್ವಾಮಿಯವರು ಪಂಚರತ್ನ ಯಾತ್ರೆ ಮುಗಿಸಿಕೊಂಡ ಬಂದ ಮೇಲೆ ಅದಕ್ಕೆ ಇನ್ನಷ್ಟು ವೇಗ ನೀಡಲಾಗುತ್ತದೆ.
– ಕೆ.ಎ. ತಿಪ್ಪೇಸ್ವಾಮಿ, ವಿಧಾನಪರಿಷತ್‌ ಸದಸ್ಯ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.