ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ
Team Udayavani, Jan 17, 2022, 10:45 AM IST
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಹಾ ಮೃತ್ಯುಂಜಯ ಹೋಮ ನೂರಾರು ಋತ್ವಿಜಯರ ಸಮ್ಮುಖದಲ್ಲಿ ಆರಂಭಗೊಂಡಿದೆ.
ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ ಶ್ರಿಂಗೇರಿ, ಬೆಂಗಳೂರು, ಕಾಸರಗೋಡು, ಮೈಸೂರು ಸಹಿತ ನಾನಾ ಕಡೆಗಳ 108 ಮಂದಿ ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಮೂಡಿಬಂದಿದೆ.
ಬೆಳಗ್ಗೆ 7 ಗಂಟೆಯಿಂದ ಚತುರ್ವೇದ ಪಾರಾಯಣ ಪ್ರಾರಂಭಿಸಿ, ಗೋಪೂಜೆ, ಮಹಾಗಣಪತಿ ಹೋಮ ಬಳಿಕ 11 ಗಂಟೆ ಸುಮಾರಿಗೆ ಮಹಾಮೃತ್ಯುಂಜಯ ಹೋಮ ಸಂಪನ್ನಗೊಳ್ಳಲಿದೆ.
ಸಚಿವರುಗಳ ಭೇಟಿ
ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ ಈಗಾಗಲೇ ಆಗಮಿಸಿದ್ದು, ಶಾಸಕ ಹರೀಶ್ ಪೂಂಜ ಹಾಗೂ ಪತ್ನಿ ಸ್ವೀಕೃತಿ ಪೂಂಜ ಹೋಮದಲ್ಲಿ ಭಾಗಿಯಾದರು.
ಪ್ರಮುಖರಾದ ಡಿ.ಹರ್ಷೇಂದ್ರ ಕುಮಾರ್, ಸಿರಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ್, ಉದ್ಯಮಿಗಳಾದ ರಾಜೇಶ್ ಪೈ, ಮೋಹನ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವಿಭಜಿತ ಜಿಲ್ಲೆಯ ಎಲ್ಲ ಶಾಸಕರುಗಳು, ವಿವಿಧ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರು, ಪ್ರಮುಖರು ಭಾಗವಹಿಸಲಿದ್ದಾರೆ.
ಸಧ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪರುಷ ಕುಂಡ, ಈತಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡ ಸೇರಿ 7 ಕುಂಡಗಳೊಳಗೊಂಡ ಮಹಾ ಮೃತ್ಯುಂಜಯ ಹೋಮ ವೈದಿಕ ವಿಧಿಗಳಿಂದ ಆರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.