ಪಠಾಣ್ ಕೋಟ್ ಸೇನಾ ಕಂಟೋನ್ಮೆಂಟ್ ಬಳಿ ಗ್ರೆನೇಡ್ ಸ್ಫೋಟ: ಕಟ್ಟೆಚ್ಚರ
Team Udayavani, Nov 22, 2021, 1:43 PM IST
ಪಠಾಣ್‌ಕೋಟ್: ಇಲ್ಲಿನ ಸೇನಾ ಕಂಟೋನ್ಮೆಂಟ್‌ನ ಗೇಟ್ ಬಳಿ ಗ್ರೆನೇಡ್ ಸ್ಫೋಟಗೊಂಡಿದ್ದು, ಗಡಿ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ನಡೆದ ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಇಲ್ಲಿನ ಧೀರಪುಲ್ ಬಳಿಯ ಮಿಲಿಟರಿ ಪ್ರದೇಶದ ತ್ರಿವೇಣಿ ದ್ವಾರದ ಮುಂದೆ ಮೋಟಾರ್‌ಸೈಕಲ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುತ್ತಿದೆ ಎಂದು ಪಠಾಣ್‌ಕೋಟ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಂಬಾ ಪಿಟಿಐಗೆ ತಿಳಿಸಿದ್ದಾರೆ.
ಸ್ಥಳದಿಂದ ಹ್ಯಾಂಡ್ ಗ್ರೆನೇಡ್‌ನ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಧಿವಿಜ್ಞಾನ ತಂಡವು ಮಾದರಿಗಳನ್ನೂ ಸಂಗ್ರಹಿಸಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.
ಸ್ಫೋಟದ ನಂತರ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಮತ್ತು ಪಠಾಣ್‌ಕೋಟ್ ಮತ್ತು ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯನ್ನು ಪರಿಶೀಲಿಸಲು ಅಮೃತಸರ ಗಡಿ ವಲಯ ಮತ್ತು ಜಲಂಧರ್ ವಲಯದ ಹಿರಿಯ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆದಿರುವುದಾಗಿ ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ.
ಐದು ವರ್ಷಗಳ ಹಿಂದೆ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.