ಜಿಎಸ್‌ ಟಿ ಪರಿಹಾರ ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸಿದ್ದರಾಮಯ್ಯ ಆಗ್ರಹ

Team Udayavani, Aug 29, 2020, 7:37 PM IST

ಜಿಎಸ್‌ ಟಿ ಪರಿಹಾರ ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯದ ಪಾಲಿನ ಜಿಎಸ್‌ಟಿ ಪರಿಹಾರ ಪಡೆಯಲು ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಹೋಂ ಕ್ವಾರಂಟೈನ್‌ ಅವಧಿ ಮುಗಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಎಸ್‌ಟಿ ಪರಿಹಾರ ನಿರಾಕರಿಸುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ದ್ರೋಹ ಎಸಗಿದೆ. ಕೋವಿಡ್ ರೋಗದಿಂದಾಗಿ ದೇಶದ ಎಲ್ಲಾ ರಾಜ್ಯಗಳು ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿವೆ ಎಂದು ಹೇಳಿದರು.

ಸರ್ಕಾರಿ ನೌಕರರಿಗೆ ಸಂಬಳ ನೀಡುವುದು ಕಷ್ಟ ಎನ್ನುವ ಪರಿಸ್ಥಿತಿ ಇದೆ. ಜಿಎಸ್‌ಟಿ ಜಾರಿಗೆ ತರುವ ಸಂದರ್ಭದಲ್ಲಿ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಒಂದು ಒಪ್ಪಂದವಾಗಿತ್ತು, ಅದರಂತೆ ಜಿಎಸ್‌ಟಿ ಸಂಗ್ರಹದಲ್ಲಿ ನಷ್ಟವಾದರೆ ಅದನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಹಾಗೂ ಮುಂದಿನ 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿಯಾಗಿರಬೇಕು. ಒಪ್ಪಂದದ ಪ್ರಕಾರ ನಡೆದಕೊಳ್ಳಬೇಕಾಗಿರುವುದು ನರೇಂದ್ರ ಮೋದಿಯವರ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.

ನಿರ್ಮಲಾ ಸೀತಾರಾಮನ್‌ ಅವರು ಈಗ ಕೊರೊನಾ ಬಂದಿದೆ, ಇದನ್ನು ಯಾರೂ ಊಹಿಸಿರಲಿಲ್ಲ, ಇದು ದೇವರ ಆಟ, ಸುಮಾರು 3 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ. ಸೆಸ್‌ನಿಂದ 65 ಸಾವಿರ ಕೋಟಿ ರೂ.ಬರುತ್ತದೆ. ಉಳಿದ 2.65 ಲಕ್ಷ ಕೋಟಿ ರೂ. ನಷ್ಟ ಆಗುತ್ತಿರುವುದರಿಂದ ನಾವು ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ರಾಜ್ಯಗಳಿಗೆ ನೀವು ರಿಸರ್ವ್‌ ಬ್ಯಾಂಕ್‌ ಗಳಿಂದ ಸಾಲ ಪಡೆದು ತಿರಿಸಿಕೊಳ್ಳಿ ಎಂದು ಕೇಂದ್ರ ವಿತ್ತ ಸಚಿವರು ಹೇಳಿದ್ದಾರೆ. ಇದರ ಬದಲು ಕೇಂದ್ರವೇ ಏಕೆ ರಿಸರ್ವ್‌ ಬ್ಯಾಂಕಿನಿಂದ ಸಾಲ ಪಡೆದು ರಾಜ್ಯಗಳಿಗೆ ನೀಡಬಾರದು? ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕುತ್ತಿರುವುದು ಏಕೆ? ಒಪ್ಪಂದದ ಪ್ರಕಾರ ನಷ್ಟ ತುಂಬಿಕೊಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದನ್ನು ನಂಬಿದ ರಾಜ್ಯದ ಜನರು 25 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ, ಜನರು ನಿಮ್ಮ ಮೇಲಿಟ್ಟಿರುವ ನಂಬಿಕೆಗೆ ಈಗ ನೀವು ಮಾಡುತ್ತಿರುವುದು ದ್ರೋಹವಲ್ಲವೇ? ರಾಜ್ಯಗಳನ್ನು ಕೇಂದ್ರ ದಿವಾಳಿಯಾಗುವತ್ತ ಕೊಂಡೊಯ್ಯುತ್ತಿದೆ. ಹಾಗಾಗಿ ಕೇಂದ್ರದ ಈ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.