ಇಂದು ಹಂಪಿ ಸರಳ ಉತ್ಸವ : ತುಂಗಾರತಿಗೆ ಭರದ ಸಿದ್ಧತೆ
Team Udayavani, Nov 13, 2020, 10:33 AM IST
ಹೊಸಪೇಟೆ: ವಿಜಯನಗರ ವೈಭವ ಸಾರುವ ಹಂಪಿ ಉತ್ಸವ ನ.13ರಂದು ಶುಕ್ರವಾರ ನಡೆಯಲಿದೆ. ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ನ.13 ರಂದು ಸಂಜೆ 4ಕ್ಕೆ ಚಾಲನೆ ನೀಡಲಿದ್ದಾರೆ. ಕೋವಿಡ್ ಮಾರ್ಗಸೂಚಿ ಅನ್ವಯವೇ ಕಾರ್ಯಕ್ರಮ ನಡೆಯಲಿದೆ.
ಶೋಭಾಯಾತ್ರೆ: ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ಜಾನಪದ ಕಲಾ ತಂಡಗಳಿಂದ ಶೋಭಾಯಾತ್ರೆ ನಡೆಯಲಿದೆ. ವಿವಿಧ ತಾಲೂಕುಗಳಿಂದ ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಲಿದೆ. ಇದಾದ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿಶೇಷ
ಪೂಜೆ ನೆರವೇರಲಿದೆ.
ತುಂಗಾರತಿ: ಹಂಪಿಯ ತುಂಗಭದ್ರಾ ದಡದ ವೇದಿಕೆ ಬಳಿ ನ.13 ರಂದು ಸಂಜೆ 7ಕ್ಕೆ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಹಂಪಿ ಉತ್ಸವದಲ್ಲಿ ನಡೆದಂತೆ ಈ ಹಂಪಿ ಉತ್ಸವದಲ್ಲಿಯೂ ತುಂಗಾ ಆರತಿ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಆನಂದಸಿಂಗ್ ಹಾಗೂ ಮುಖ್ಯ ಅತಿಥಿಗಳು, ಅತಿಥಿಗಳು ಮತ್ತು ವಿಶೇಷ
ಆಹ್ವಾನಿತರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ:ಬಳ್ಳಾರಿ ಪಾಲಿಕೆ ನೂತನ ಆಯುಕ್ತರಾಗಿ ಪ್ರೀತಿ ಗೆಹ್ಲೋಟ್ ನಿಯೋಜನೆ
ಕಲಾತಂಡಗಳು: ಬಳ್ಳಾರಿ ತಾಲೂಕಿನ ಮೋಹನ್ ಮತ್ತು ತಂಡದವರ ತಷಾರಂಡೋಲ್, ಕುರುಗೋಡು ಚನ್ನಸ್ವಾಮಿ ಮತ್ತು ತಂಡದಿಂದ ಹಗಲುವೇಷ ಹಗರಿಬೊಮ್ಮನಹಳ್ಳಿಯ ಏಣಿಗಿ ರಾಮಪ್ಪ ಮತ್ತು ತಂಡದವರ ಹಲಗೆ ವಾದನ, ಸಂಡೂರು
ಚಂದ್ರಶೇಖರ್ ಮತ್ತು ತಂಡದವರಿಂದ ಡೊಳ್ಳುಕುಣಿತ, ಬಳ್ಳಾರಿಯ ಎಂ.ನಾಗರಾಜ ಸ್ವಾಮಿ ಮತ್ತು ತಂಡದವರಿಂದ ವೀರಗಾಸೆ ಹಾಗೂ ದೊಡ್ಡಬಸಪ್ಪ ಮತ್ತು ತಂಡದವರಿಂದ ನಾಡಗೀತೆ, ಹಳೇದರೊಜಿ ಅಶ್ವರಾಮಣ್ಣ ಮತ್ತು ತಂಡದವರಿಂದ ಹಗಲುವೇಷ
ಸಿರಗುಪ್ಪ ದೊಡ್ಡರಾಮಣ್ಣ ಮತ್ತು ತಂಡದವರಿಂದ ಸಿಂದೋಳ್ ಕುಣಿತ, ಹೊಸಪೇಟೆಯ ಶರಣಪ್ಪ ಮತ್ತು ತಂಡ ಕಹಳೆ ವಾದನ, ನಾರಾಯಣಪ್ಪ ಮತ್ತು ತಂಡದವರಿಂದ ನಾದಸ್ವರ, ಆಂಜನೇಯ ಮತ್ತು ತಂಡದವರಿಂದ ಡೊಳ್ಳು ಕುಣಿತ, ಕಂಪ್ಲಿಯ ಕೆ.ಅಂಜಲಿ ಮತ್ತು ತಂಡದವರಿಂದ ಹಕ್ಕಿ ಪಿಕ್ಕಿ ಬುಡಕಟ್ಟು ನೃತ್ಯ, ಹೊಸಪೇಟೆಯ ಏಸುಪ್ ಮತ್ತು ತಂಡದವರಿಂದ ಮರಗಾಲುಕುಣಿತ, ಅಮೃತಾ ಮತ್ತು ತಂಡದವರಿಂದ ಶಾಸ್ತ್ರೀಯ ನೃತ್ಯ, ಹಡಗಲಿ ಮಲ್ಲಯ್ಯ ಮತ್ತು ತಂಡದವರ ಗೊರವರ ಕುಣಿತ, ಕೊಟ್ಟೂರು ವೀರಭದ್ರೇಶ್ವರ ವಾದ್ಯವೃಂದ ನಂದಿಧ್ವಜ ಕುಣಿತ, ಹರಪನಹಳ್ಳಿ ವಿಶ್ವಕಲಾ ರೈತ ಭಜನಾ ಸಂಘದಿಂದ
ಕೀಲು ಕುದುರೆ, ಕೂಡ್ಲಿಗಿ ದುರುಗಮ್ಮ ಮತ್ತು ತಂಡದಿಂದ ಮಹಿಳಾ ಡೊಳ್ಳು ಕುಣಿತ ಪ್ರದರ್ಶನಗಳು ಈ ಬಾರಿಯ ಹಂಪಿ ಉತ್ಸವದಲ್ಲಿ ನಡೆಯಲಿವೆ.
ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ. ದೇವೇಂದ್ರಪ್ಪ, ಜಿ.ಎಂ. ಸಿದ್ದೇಶ್ವರ, ಕರಡಿ ಸಂಗಣ್ಣ, ಸೈಯದ್
ನಾಸೀರ್ ಹುಸೇನ್, ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ.ನಾಗೇಂದ್ರ, ಎನ್. ವೈ. ಗೋಪಾಲಕೃಷ್ಣ, ಭೀಮಾನಾಯ್ಕ ಎಲ್. ಬಿ.ಪಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ. ಕರುಣಾಕರರೆಡ್ಡಿ, ಜಿ. ಸೋಮಶೇಖರರೆಡ್ಡಿ, ಎಂ.ಎಸ್.
ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಡಾ. ಚಂದ್ರಶೇಖರ ಬಿ.ಪಾಟೀಲ, ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಾದೇಶಿಕ ಆಯುಕ್ತ ಎನ್.ವಿ. ಪ್ರಸಾದ್, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಸ್. ನಂಜುಂಡಸ್ವಾಮಿ ಮತ್ತು ಕಎಸ್.ರಂಗಪ್ಪ, ಕಾಳಿ ಆಗಮಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.