Election 2023; ಹಲವೆಡೆ ಕೈಕೊಟ್ಟ ಮತಯಂತ್ರ; ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ನವವಧು

ಈದುವಿನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬವಾಗಲು ಕಾರಣವಾಗಿದೆ

Team Udayavani, May 10, 2023, 12:13 PM IST

Election 2023; ಹಲವೆಡೆ ಕೈಕೊಟ್ಟ ಮತಯಂತ್ರ; ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ನವವಧು

ಚಿಕ್ಕಮಗಳೂರು:ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು,   ಪುರುಷರು ಅತ್ಯುತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಜಿಲ್ಲೆಯ ಮೂಡಿಗೆರೆಯಲ್ಲಿ ಬುಧವಾರ (ಮೇ 10) ಮದು ಮಗಳು ಹಸೆಮಣೆ ಏರುವ ಮೊದಲು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಯವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ.

ಇದನ್ನೂ ಓದಿ:Vote ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

ಮೂಡಿಗೆರೆಯ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು  ಅವರ ಮಗಳಾದ ಸುಶ್ಮಿತ ಅವರ ವಿವಾಹವು ಬುಧವಾರ ಮೂಡಿಗೆರೆ ರೈತಭವನದಲ್ಲಿ ಇದ್ದು, ಮದುಮಗಳು ಶೃಂಗಾರಗೊಂಡು ಮಾಕೋನ ಹಳ್ಳಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ನಂತರ ಮದುವೆ ಮಂಟಪಕ್ಕೆ ಆಗಮಿಸಿದ್ದರು.

ಮತಗಟ್ಟೆ ಅಧಿಕಾರಿ ಯಡವಟ್ಟು; ಚಾಮನೂರು ಮತ ಕೇಂದ್ರದಲ್ಲಿ ಗಲಾಟೆ

ಕಲಬುರಗಿ: ಚಿತ್ತಾಪುರ ತಾಲೂಕಿನ ಚಾಮನೂರು ಮತ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಯೊಬ್ಬರು ಮತದಾರನ ಮತವನ್ನು ಬದಲಿ ಪಕ್ಷಕ್ಕೆ ಹಾಕಿದ್ದರಿಂದ ಗಲಾಟೆ ಆಗಿರುವ ಘಟನೆ ಜರುಗಿದೆ. ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿಯೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ.

ಈ ಅಧಿಕಾರಿ ಮತ ಗಟ್ಟೆಗೆ ಬಂದಿದ್ದ ಬಸಮ್ಮ ಯಂಟ್ಮನ  ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್‌ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾಳೆ. ಆದರೆ ಅಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬಯಲಿಗೆ ಬಂದು ಗಲಾಟೆಯಾಗಿದೆ.

ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಗೆ ಸುಮಾರು ಐವತ್ತಕ್ಕೂ ಅಧಿಕ  ಮತ ಹಾಕಲಾಗಿದೆ ಎಂದು ಹೇಳಲಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ವಿಷಯ ತಿಳಿದು  ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಚಿತ್ತಾಪುರ ಚುನಾವಣಾಧಿಕಾರಿಗೆ ವಿಷಯ ತಿಳಿಸಿ ಅಧಿಕಾರಿಯನ್ನು ಬದಲಿಸಲು ಒತ್ತಾಯಿಸಿದ್ದರು.

ಇದರಿಂದಾಗಿ ಅಧಿಕಾರಿಯನ್ನು ಬದಲಾವಣೆ ಮಾಡಿದ ಬಳಿಕ ಮತದಾನ ಪುನರಾರಂಭಗೊಂಡಿತು ಎಂದು ಮೂಲಗಳು ತಿಳಿಸಿವೆ.

45 ನಿಮಿಷ ಮತದಾನ ವಿಳಂಬ:

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಗೋಕುಲಂ ಲಯನ್ಸ್‌ ಶಾಲೆಯ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಸುಮಾರು 45 ನಿಮಿಷಗಳ ಕಾಲ ತಡವಾಗಿ ಮತದಾನ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ.

ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಮತಗಟ್ಟೆ ಸಂಖ್ಯೆ 105ರಲ್ಲಿ ಇವಿಎಂ ದೋಷದಿಂದಾಗಿ 8ಗಂಟೆಯಾದರೂ ಮತದಾನ ಆರಂಭವಾಗಿಲ್ಲ. ಏತನ್ಮಧ್ಯೆ ಹಲವು ಮತದಾರರು ಮತದಾನ ಮಾಡದೇ ವಾಪಸ್ ತೆರಳಿದ್ದಾರೆಂದು ವರದಿ ವಿವರಿಸಿದೆ.

ಕಾರ್ಕಳ ತಾಲೂಕಿನ ಈದುವಿನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬವಾಗಲು ಕಾರಣವಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವಿಎಂ ನಿಧಾನಗತಿಯಲ್ಲಿ ಕಾರ್ಯಾಚರಿಸುತ್ತಿರುವುದರಿಂದ ಮತದಾನ ವಿಳಂಬವಾಗುತ್ತಿದೆ ಎಂದು ಮತದಾರರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.