ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ಕಾಫಿ ಎಲೆಯಿಂದಲೂ ಪಾನೀಯ


Team Udayavani, Nov 13, 2021, 5:13 PM IST

22coffee

ಮೈಸೂರು: ದಿನೇ ದಿನೇ ಏರುತ್ತಿರುವ ಉತ್ಪಾದನಾ ವೆಚ್ಚ, ಪ್ರತೀಕೂಲ ಹವಾಮಾನ, ಕೋವಿಡ್‌ ಲಾಕ್‌ ಡೌನ್‌ ಹಾಗೂ ದರ ಕುಸಿತದ ಕಾರಣದಿಂದ ಕಾಫಿ ಬೆಳೆಗಾರರು ಇಂದು ಸಂಕಷ್ಟದಲ್ಲಿದ್ದಾರೆ. ಇದೀಗ ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯದ (CFTRI) ವಿಜ್ಞಾನಿಯೊಬ್ಬರು ಕಾಫಿ ಬೆಳೆಗಾರರು ತಮ್ಮ ತೋಟಗಳಿಂದ ಹೆಚ್ಚಿನ ಆದಾಯ ಗಳಿಸುವ ಸಂಶೋಧನೆಯೊಂದನ್ನು ಮಾಡಿ ಯಶಸ್ವಿ ಆಗಿದ್ದಾರೆ.

ಕಾಪಿ ಎಲೆಗಳಿಂದಲೂ ಪಾನೀಯ ತಯಾರು ಮಾಡುವ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಿರುವ ಮೈಸೂರು ಸಂಶೋಧನಾಲಯ ಪ್ರಧಾನ ವಿಜ್ಞಾನಿ ಪುಷ್ಪಾ ಎಸ್‌ ಮೂರ್ತಿ ಅವರು ಇದರಿಂದ ಮನುಷ್ಯನ ಆರೋಗ್ಯಕ್ಕೂ ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಈ ಕುರಿತು ಈ ವರದಿಗಾರರೊಂದಿಗೆ ಮಾತನಾಡಿದ ಅವರು ಕಾಫಿ ಎಲೆಗಳಿಂದ ಪಾನೀಯ ತಯಾರು ಮಾಡುವುದರಿಂದ ಬೆಳೆಗಾರರಿಗೆ ವರ್ಷವಿಡೀ ಆದಾಯ ಲಭಿಸಲಿದೆ ಎಂದು ಹೇಳಿದರು.

2019 ರಿಂದಲೇ ತಾವು ಈ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸುತಿದ್ದು ಇದಕ್ಕೆ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದಿಂದ ಅನುದಾನವನ್ನು ಪಡೆದುಕೊಳ್ಳಲಾಗಿದೆ ಎಂದರು.

ಕಾಫಿ ಬೀಜದ ಬೆಳವಣಿಗೆಗೆ ಅಡ್ಡಿಯಾಗದಂತೆ ರೈತರು ಹಿಂಗಾರು ಹಂಗಾಮಿನ    ಸಮಯದಲ್ಲಿ ಬಲಿತ ಕಾಫಿ ಎಲೆಗಳನ್ನು ಬಳಸಿದರೆ, ಅದು ಕಾಫಿ ಬೆಳೆಗಾರರ   ಆರ್ಥಿಕ ಅಭಿವೃದ್ದಿಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಸಾಗರ: ವಾಂತಿ, ಬೇಧಿ ; ನೂರಾರು ಮಂದಿ ಆಸ್ಪತ್ರೆಗೆ ದಾಖಲು, ಆತಂಕ

ಇಂದು ಕಾಫಿ ಉದ್ಯಮದ ಸುಮಾರು 70 ಪ್ರತಿಶತದಷ್ಟು ಜನರು ಕಾಫಿ ಬೀಜಗಳ ಬೆಳವಣಿಗೆಯ ಚಕ್ರದ ಸ್ವರೂಪದಿಂದಾಗಿ ವರ್ಷದ ಒಂಬತ್ತು ತಿಂಗಳುಗಳ ಕಾಲ ನಿರುದ್ಯೋಗಿಗಳಾಗಿರಬೇಕಾಗುತ್ತದೆ. ಆದರೆ ಈ ಪಾನೀಯ ಯಶಸ್ವಿ ಆದರೆ ಕಾಫಿ ಬೆಳೆಗಾರರಿಗೆ ವರ್ಷಪೂರ್ತಿ ಉದ್ಯೋಗ ಲಭಿಸಲಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಪುಷ್ಪಾ ಅವರು ಮಾತನಾಡಿ, ಕಾಫಿ ಎಲೆಗಳು ನಿರುಪಯುಕ್ತ ವಸ್ತು ಎಂದು ಭಾವಿಸಲಾಗುತ್ತದೆ. ಆದರೆ ಕಾಫಿ ಬೆಳೆಯುವ ದೇಶವೇ ಆಗಿರುವ ಇಂಡೋನೇಷ್ಯಾ ಮತ್ತು ಇಥಿಯೋಪಿಯಾದಲ್ಲಿ   ಕಾಫಿ ಎಲೆಯಿಂದ ಪಾನೀಯವನ್ನು ತಯಾರಿಸುವುದು ಹೊಸತೇನಲ್ಲ. ಅಲ್ಲಿ ಇದನ್ನು ಹಿಂದಿನಿಂದಲೇ ತಯಾರಿಸುತಿದ್ದು, ಇದನ್ನು “ಕುಟಿ ಟೀ” ಎಂದು ಕರೆಯಲಾಗುತ್ತದೆ ಮತ್ತು ಪಶ್ಚಿಮ ಸುಮಾತ್ರಾ ಮತ್ತು ಇಂಡೋನೇಷ್ಯಾದಲ್ಲಿ “ಕಹ್ವಾ ಡಾನ್” ಎಂದು ಕರೆಯಲಾಗುತ್ತದೆ. ಆದರೆ ಈ ಪ್ರದೇಶಗಳಲ್ಲಿನ ಪಾನೀಯ CFTRI ಅಭಿವೃದ್ಧಿಪಡಿಸಿದ ಪಾನೀಯಕ್ಕಿಂತ ಭಿನ್ನವಾಗಿದೆ ಈ ಪಾನೀಯವನ್ನು ನೀರಿನಿಂದ ತಯಾರಿಸಬಹುದು, ಕೆಲವು ನಿಮಿಷಗಳ ಕಾಲ ಫಿಲ್ಟರ್ ಮಾಡಿ ಸೇವಿಸಬಹುದು ಎಂದು ಹೇಳಿದರು.

ಎಲೆಯ ಸಾರವು ಕಾಫಿಯಂತೆ ರುಚಿಸುವುದಿಲ್ಲ. “ಕಾಫಿ ಅಥವಾ ಚಹಾಕ್ಕೆ ಹೋಲಿಸಿದರೆ ಇದು ಕಡಿಮೆ ಕೆಫೀನ್‌ ಅಂಶ ಹೊಂದಿದೆ ಎಂದು ಅವರು ಹೇಳಿದರು.

ಪಾನೀಯದ ಪೌಷ್ಟಿಕಾಂಶದ ಮೌಲ್ಯದ ಕುರಿತು, ಮಾತನಾಡಿದ ಅವರು ಕಾಫಿ ಎಲೆಗಳಲ್ಲಿ ಫಿನಾಲಿಕ್ ಆಮ್ಲ ಸಮೃದ್ಧವಾಗಿದೆ ಮತ್ತು ಸಂಭಾವ್ಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂದು   ಹೇಳಿದರು.

ಒಂದು ಕಾಫಿ ಎಲೆಯು ಹಸಿರು ಚಹಾಕ್ಕಿಂತ ಸುಮಾರು 17 ಪ್ರತಿಶತ ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಪಾನೀಯವನ್ನು ಸರಳವಾಗಿ ಸೇವಿಸಬೇಕು. ಪಾನೀಯವು ಕ್ಲೋರೊಜೆನಿಕ್ ಆಮ್ಲ ಮತ್ತು ಮ್ಯಾಂಗಿಫೆರಿನ್‌ನಂತಹ ಆರೋಗ್ಯ-ಉತ್ತೇಜಿಸುವ ಪಾಲಿಫಿನಾಲ್‌ಗಳನ್ನು ಹೊಂದಿದ್ದು, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ, ಉರಿಯೂತ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಈ ನೂತನ ತಂತ್ರಜ್ಞಾನದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲು ನಿರಾಕರಿಸಿದ ಅವರು 2019 ರಲ್ಲಿ ಆರಂಭಗೊಂಡಿರುವ ಈ ಯೋಜನೆ ಎರಡು ವರ್ಷಗಳಲ್ಲಿ ಮುಗಿಯಬೇಕಾಗಿತ್ತು.  ಕೋವಿಡ್‌ ಕಾರಣದಿಂದಾಗಿ ಮತ್ತೆ 6 ತಿಂಗಳು ಮುಂದೆ ಹೋಗಿದೆ ಎಂದರು.

ಈ ತಂತ್ರಜ್ಞಾನವನ್ನು ಕೇಂದ್ರೀಯ ಸಂಶೋಧನಾಲಯದ ಉನ್ನತ ಮಟ್ಟದ ಸಮಿತಿಯ ಮುಂದೆ ಇಟ್ಟು ಆಸಕ್ತ ಉದ್ಯಮಿಗಳು, ವ್ಯಕ್ತಿಗಳಿಗೆ  ರಾಯಲ್ಟಿ ಪಡೆದು ನೀಡಲು ಯೋಜಿಸಲಾಗಿದೆ ಎಂದ ಅವರು  ಸುಮಾರು ಒಂದು ಲಕ್ಷ ರೂಪಾಯಿ ಸಹಾಯಧನ ನಿಗದಿಪಡಿಸುವ ಸಾಧ್ಯತೆ ಇದೆ. ಆದರೆ ಈ ಕುರಿತು ಸಮಿತಿಯು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು. ವಿಜ್ಞಾನಿ ಪುಷ್ಪಾ ಅವರ ನೂತನ ಸಂಶೋಧನೆ ಕಾಫಿ ಉದ್ಯಮದಲ್ಲಿ ಕ್ರಾಂತಿಯನ್ನೇ ಮಾಡುವ ಸಾದ್ಯತೆ ಇದೆ ಎಂದರು.

ಪುಷ್ಪಾ ಅವರು ಕಳೆದ ಎರಡು ದಶಕಗಳಿಂದ ಕೇಂದ್ರೀಯ ಆಹಾರ ಸಂಶೋಧನಾಲಯದಲ್ಲಿ ಕೆಲಸ ಮಾಡುತಿದ್ದು ಕಾಫಿ ಹಾಗೂ ಸಂಬಾರ ಪದಾರ್ಥಗಳ ಕುರಿತು ಅನೇಕ ಸಂಶೋಧನೆಗಳನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!

Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!

Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ

Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ

Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ

Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ

ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ

ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ

15

Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.