ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ; ಅಪರಾಧಿಗೆ 10 ವರ್ಷ ಶಿಕ್ಷೆ
Team Udayavani, Mar 29, 2021, 7:16 PM IST
ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಾಲೂಕಿನ ಹನುಮನಳ್ಳಿಯ ಶ್ರೀನಾಥ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ಆರೋಪಿಗೆ ಶಿಕ್ಷೆ
ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಹನುಮನಳ್ಳಿ ಗ್ರಾಮದ ಶ್ರೀನಾಥ ಭೋವಿ ಎಂಬ ಆರೋಪಿ ಹನುಮನಳ್ಳಿ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಪರಿಚಯ ಮಾಡಿಕೊಂಡು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ನಂತರ 2016ರ ಆಗಸ್ಟ್. 02 ರಂದು ರಾತ್ರಿ ವೇಳೆಯಲ್ಲಿ ಅವಳಿಗೆ ಪುಸಲಾಯಿಸಿ ಅಪಹರಣ ಮಾಡಿ ಮಂತ್ರಾಲಯಕ್ಕೆ ಹೋಗಿ ಅಲ್ಲಿ ಒಂದು ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಆರೋಪಿಯ ವಿರುದ್ಧ ಕೊಪ್ಪಳ ಸಿಪಿಐ ಭೀಮಣ್ಣ ಸೂರಿ ಅವರು ದೋಷಾರೋಪಣೆ ಸಲ್ಲಿಸಿದ್ದರು.
ಇದನ್ನೂ ಓದಿ :ಬ್ಯಾನರ್ಜಿಗೆ ಮತ ಚಲಾಯಿಸಿದರೆ, ಬಂಗಾಳ ಮಿನಿ ಪಾಕಿಸ್ತಾನ : ಸುವೇಂದು ಅಧಿಕಾರಿ
ಈ ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಶ್ರೀನಾಥ ಭೋವಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 25 ಸಾವಿರ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20 ಸಾವಿರಗಳನ್ನು ಬಾಧಿತಳಿಗೆ ನೀಡುವಂತೆ ನ್ಯಾಯಾಧೀಶ ಶಂಕರ ಎಂ. ಜಾಲವಾದಿ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಗೌರಮ್ಮ ದೇಸಾಯಿ ಅವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.