ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ
Team Udayavani, Nov 29, 2021, 7:48 PM IST
ಮಂಗಳೂರು: ತನ್ನ ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.
ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು,ತಡವಾಗಿ ಬೆಳಕಿಗೆ ಬಂದಿತ್ತು. ರತ್ನಾಕರ್ ಮಹಿಳಾ ಸಿಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳು ಮಾಧ್ಯಮದಲ್ಲಿ ಶುಕ್ರವಾರ ಪ್ರಸಾರವಾದ ಬೆನ್ನಲ್ಲೇ ಕಚೇರಿ ಸಿಬಂದಿಯೊಬ್ಬರು ನಗರ ಪೊಲೀಸ್ ಆಯುಕ್ತರು ಹಾಗೂ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಆರೋಪಿ ರತ್ನಾಕರ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು
ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ :ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.