ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
Team Udayavani, Jan 19, 2021, 5:22 PM IST
ಧಾರವಾಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನಗರದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ
ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.
ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ
ಮಾಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಮಾಡಿದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಪಂಚಾಕ್ಷರಿ ಅವರು, ಮಾಬೂಲಿ ಶೇಖ್ ಮೇಲಿದ್ದ ಆರೋಪ ಸಾಬೀತಾದ ಕಾರಣ ಪೋಕ್ಸೋ ಕಾಯ್ದೆಯಡಿ 5 ವರ್ಷ ಶಿಕ್ಷೆ, 4 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ
ಸರಕಾರದ ಪರವಾಗಿ ಅಭಿಯೋಜಕಿ ಗಿರಿಜಾ ತಮ್ಮಿನಾಳ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.