ಹರ್ಷ ಹತ್ಯೆ ಕೇಸ್: ಮತ್ತಿಬ್ಬರು ಅರೆಸ್ಟ್; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ
Team Udayavani, Feb 23, 2022, 6:56 PM IST
ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆ.
ಬಂಧಿತರು ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಚೋದನಕಾರಿ ಪೋಸ್ಟ್ : ‘ಮಂಗಳೂರು ಮುಸ್ಲಿಂ’ ಫೇಸ್ ಬುಕ್ ಪೇಜ್ ವಿರುದ್ಧ ಎಫ್ ಐಆರ್
ಈ ಹಿಂದೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ 6 ಮಂದಿ ಆರೋಪಿಗಳನ್ನು ಪೊಲೀಸರು. ಬಂಧಿಸಿದ್ದರು. ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಪೊಲೀಸರು 4 ಮಂದಿ ಆರೋಪಿಗಳಾದ ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಕೊಲೆ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳವಾರ ಸಂಜೆ ಮೊಹಮ್ಮದ್ ಖಾಸೀಫ್ ಹಾಗೂ ಯ್ಯದ್ ನದೀಂರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.ಕೊಲೆ ಪ್ರಕರಣದ 6 ಆರೋಪಿಗಳಿಗೂ ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.