Hassan: ರೇವಣ್ಣ ಕುಟುಂಬದಿಂದ ಸ್ವರೂಪ್‌ಗೆ ಅಭಯ
Team Udayavani, Apr 20, 2023, 7:19 AM IST
ಹಾಸನ: ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಎಚ್.ಪಿ.ಸ್ವರೂಪ್ ಅವರಿಗೆ ಘೋಷಣೆಯಾದ ಬೆನ್ನಲ್ಲೇ ಬುಧವಾರ ಮಹತ್ತರ ಬೆಳವಣಿಗೆಯಾಗಿದೆ. ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದ್ದ ಎಚ್.ಡಿ.ರೇವಣ್ಣ ಕುಟುಂಬ ಮುನಿಸು ಮರೆತು ಸ್ವರೂಪ್ ಬೆಂಬಲಕ್ಕೆ ನಿಂತಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವೆವು ಎಂದು ಅಭಯ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.
ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಹಾಸನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರು ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದೇ ನಮ್ಮ ಗುರಿ. ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರು ಮಾಡಿರುವ ಆವಹೇಳನದ ಮಾತುಗಳನ್ನು ನಾವು ಮರೆತಿಲ್ಲ. ಟಿಕೆಟ್‌ಗಾಗಿ ಇದುವರೆಗೆ ನಡೆದಿದ್ದ ಎಲ್ಲ ಬೆಳವಣಿಗೆಗಳು ಹಾಗೂ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಸ್ವರೂಪ್ ಅವರನ್ನು ಗೆಲ್ಲಿಸೋಣ ಎಂದು ಹೇಳಿದರು.
ದೇವೇಗೌಡರ ಆರೋಗ್ಯ ಮುಖ್ಯ:
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಬಗ್ಗೆ ಕಳೆದೊಂದು ತಿಂಗಳಲ್ಲಿ ಮಾಧ್ಯಮಗಳ ವರದಿಯಿಂದ ಹಾಸನದಲ್ಲಿ ಏನೋ ಆಗುತ್ತಿದೆ ಎಂಬ ಭಾವನೆಯಿತ್ತು. ಆದರೆ, ನನ್ನ ಮಾವ ಎಚ್.ಡಿ.ದೇವೇಗೌಡರ ಆರೋಗ್ಯ ಮುಖ್ಯ. ಜೆಡಿಎಸ್ ಪಕ್ಷ ಮುಖ್ಯ. ನಾನು ಪಕ್ಷಕ್ಕಿಂತ ದೊಡ್ಡವಳಲ್ಲ ಎಂದು ನಿರ್ಧರಿಸಿ ನಾನೇ ಸ್ವತಃ ಎಚ್.ಡಿ.ಕುಮಾರಸ್ವಾಮಿಗೆ ಫೋನ್ ಮಾಡಿ ಸ್ವರೂಪ್‌ಗೆ ಶುಭದಿನವಾದ ಶುಕ್ರವಾರವೇ ಟಿಕೆಟ್ ಘೋಷಣೆ ಮಾಡಿ ಎಂದು ಹೇಳಿದ್ದೆ ಎಂದರು.
ದೇವೇಗೌಡರ ನಿರ್ದೇಶನದಂತೆ ನಡೆದಿದ್ದೇವೆ
ಎಚ್.ಡಿ.ರೇವಣ್ಣ ಮಾತನಾಡಿ, ಹಾಸನದ ಶಾಸಕ ನಮ್ಮ ಕುಟುಂಬಕ್ಕೆ ಪಂಥಾಹ್ವಾನ ನೀಡಿದ್ದರಿಂದ ಸವಾಲು ಸ್ವೀಕರಿಸಿದ್ದೆವು. ಹಾಗಾಗಿ ಭವಾನಿ ಹಾಸನದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರ ನಿರ್ದೇಶನಕ್ಕೆ ಬದ್ಧರಾಗಿ ಭವಾನಿ ರೇವಣ್ಣ ಅವರು ತ್ಯಾಗ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.