ಭೂಸುಧಾರಣ ಕಾಯ್ದೆಯಲ್ಲಿ ಮಾರಕವಾದ ಅಂಶವಾದರೂ ಯಾವುದು? ಪ್ರತಿಭಟನಾಕಾರರಿಗೆ HDK ಪ್ರಶ್ನೆ


Team Udayavani, Dec 9, 2020, 12:22 PM IST

ಜೆಡಿಎಸ್‌ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ? :ಕುಮಾರಸ್ವಾಮಿ

ಬೆಂಗಳೂರು : ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರತಿಭಟನಾನಿರತರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿಕೆ ನಿಜವಾಗಿಯೂ ಭೂ ಸುಧಾರಣೆಯಲ್ಲಿ ಯಾವೆಲ್ಲಾ ಬದಲಾವಣೆ ತರಲಾಗಿದೆ ಎಂಬುದನ್ನು ಪ್ರತಿಭಟನಾಕಾರರಿಗೆ ಅವಲೋಕಿಸುವಷ್ಟು ತಾಳ್ಮೆ ಇಲ್ಲ ಮೊದಲಿದ್ದ ಕಾಯ್ದೆಗೂ ಈಗಿರುವ ಕಾಯ್ದೆಗೂ ಬಹಳಷ್ಟು ಬದಲಾವಣೆ ತರಲಾಗಿದೆ ಹಾಗಾಗಿ ಪ್ರತಿಭಟನಾಕಾರರು ಮೊದಲು ಬದಲಾವಣೆಗೊಳಿಸಿದ ಭೂ ಸುಧಾರಣಾ ಕಾಯ್ದೆಯನ್ನು ಪರಿಶೀಲಿಸಿ ಬಳಿಕ ಪ್ರತಿಭಟನೆ ನಡೆಸಲಿ ಎಂದು ಹೇಳಿದ್ದಾರೆ.

ರೈತರ ಕಾಯಿದೆ ಬಗ್ಗೆ ಬಿಜೆಪಿಯ ಪರವಾಗಿ ಜೆಡಿಎಸ್ ಒಲವು ತೋರಿಸುತ್ತಿದೆ ಎಂಬ ಕಾಂಗ್ರೆಸ್ ಹಾಗೂ ರೈತ ಮುಖಂಡರ ಹೇಳಿಕೆಗೆ ಸಮರ್ಥನೆಯನ್ನು ನೀಡಿದ ಹೆಚ್ ಡಿಕೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ.

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೃಷಿಕಾಯ್ದೆಗಳ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ರಾಜ್ಯಪ್ರವಾಸ; ಬಿ.ಸಿ. ಪಾಟೀಲ್

ಜೆಡಿಎಸ್‌ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ.

ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದರು.

ಕಾಯ್ದೆಯಲ್ಲಿನ 79(ಎ, ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, ‘ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ’ ಎಂದು ಪ್ರತಿಪಾದಿಸಿದ್ದರು. ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ:ಮಧ್ಯಪ್ರದೇಶ : ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದವರ ಕಾರು ಬಾವಿಗೆ ಬಿದ್ದು 6 ಸಾವು, 3 ಗಂಭೀರ

79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್‌ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್‌ ಎಂದರು.

79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈಜ್ಞಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.