ನೀಟ್‌ ಎಂಬ ‘ಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? HDK ಪ್ರಶ್ನೆ


Team Udayavani, Mar 2, 2022, 1:45 PM IST

ನೀಟ್‌ ಎಂಬ ‘ಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? HDK ಪ್ರಶ್ನೆ

ಬೆಂಗಳೂರು : ನವೀನ್‌ ಸಾವು ‘ನೀಟ್‌’ ಎಂಬ ಶಿಕ್ಷಣದ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ.” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ನೀಟ್ ಶಿಕ್ಷಣದ ಕುರಿತು ಕೇಂದ್ರ ಸರಕಾರದ ವಿರುದ್ಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ.. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ. 10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.

ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ʼಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ʼವಿಶ್ವಗುರುʼ ಆಗಬೇಕೆಂದು ಹಾತೊರೆಯುತ್ತಿರುವ ʼಭಾರತದ ಆತ್ಮಸಾಕ್ಷಿʼಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ? ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ʼಟ್ಯೂಷನ್ ಅಂಗಡಿʼಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ!

ಇದನ್ನೂ ಓದಿ : ದುಡ್ಡು ಕೊಡದಿದ್ರೆ 1 ದಿನದ ಕೆಲಸಕ್ಕೆ  ತಿಂಗಳು ಅಲೆಸುತ್ತಾರೆ

ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ʼಟ್ಯೂಷನ್ ಅಂಗಡಿʼಗಳು ಮಾರುಕಟ್ಟೆ ವಿಸ್ತರಿಸಿ ನವೀನ್ʼರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ʼದಾಸೋಹʼ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. “ವಿದೇಶದಲ್ಲಿ ವೈದ್ಯಪದವಿ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ ಮತ್ತು ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ” ಎಂದಿದ್ದಾರೆ.

ಕೇಂದ್ರದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, “ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ” ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ. ʼಟ್ಯೂಷನ್ ಅಂಗಡಿʼಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್‌ ಸೃಷ್ಟಿಸಿದ ʼಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು?

ನವೀನ್‌ ಸಾವು ನೀಟ್‌ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.