ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK
Team Udayavani, Jan 25, 2021, 6:57 PM IST
ಬೆಂಗಳೂರು : ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಿಗೆ ಕಿವಿಮಾತು ಹೇಳಿದ್ದಾರೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಈ ರೀತಿಯಾಗಿ ಹೇಳಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು.
ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದಿದ್ದಾರೆ.
ಅಲ್ಲದೆ ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ
ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ರಾಜ್ಯದಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ರೈತರ ಶಾಂತಿಯುತ ಪ್ರತಿಭಟನೆಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು. ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು ಎಂದಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ರೈತ ಕ್ರಾಂತಿಯನ್ನು ಹಾದಿ ತಪ್ಪಿಸುವ ಹುನ್ನಾರಗಳಿಗೆ ಮಣಿಯದಿದ್ದರೆ ನೈಜ ಕಳಕಳಿಯ ಹೋರಾಟ ತಾರ್ಕಿಕ ಅಂತ್ಯ ಕಂಡು ಗೆಲವು ಆಗುತ್ತದೆ ಎಂಬುದು ಪ್ರಾಮಾಣಿಕ ಅನಿಸಿಕೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್ಐಆರ್ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.