ಚಿತ್ರದುರ್ಗ: ಗೋಡೆ ಕುಸಿತ; ಮೂರು ಜನರ ಸಾವು
Team Udayavani, Nov 19, 2021, 9:46 AM IST
ಚಿತ್ರದುರ್ಗ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮನೆಗಳ ಗೋಡೆ ಕುಸಿದು ಮೂರು ಜನ ಮೃತಪಟಿರುವ ಪ್ರತ್ಯೇಕ ಘಟನೆಗಳು ನಾಯಕನಹಟ್ಟಿ ಹಾಗೂ ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಗುಡಿಸಿಲಿನ ಮೇಲೆ ಅಂಗನವಾಡಿ ಗೋಡೆ ಕುಸಿದು ಬಿದ್ದು ಪತಿ ಹಾಗೂ ಪತ್ನಿ ಮಲಗಿದ್ದ ಸ್ಥಳದಲ್ಲೇ ಮೃತಟ್ಟಿದ್ದಾರೆ.
ಪತಿ ಕಂಪಳೇಶಪ್ಪ (45 ವ) ಹಾಗೂ ಪತ್ನಿ ತಿಪ್ಪಮ್ಮ(38 ವ) ಮೃತಪಟ್ಟಿದ್ದು, ಪುತ್ರ ಅರುಣ್ ಕುಮಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಂಗನವಾಡಿ ಪಕ್ಕದಲ್ಲೇ ಗುಡಿಸಲಿನಲ್ಲಿ ವಾಸಿಸುತ್ತಿದ್ದ ದಂಪತಿ ಮೇಲೆ ಮಳೆಗೆ ಒದ್ದೆಯಾಗಿದ್ದ ಅಂಗನವಾಡಿ ಗೋಡೆ ಕುಸಿದು ಬಿದ್ದು ಮೃತಪಟಿರುವುದಕ್ಕೆ ನಾಯಕನಹಟ್ಟಿ ಜನತೆ ಮರುಗಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ತಿರುಪತಿ ತಿಮ್ಮಪ್ಪನಿಗೆ ವರುಣನ ದಿಗ್ಭಂಧನ,ಕೊಚ್ಚಿಹೋದ ವಾಹನಗಳು
ಬ್ಯಾಡರಹಳ್ಳಿಯಲ್ಲಿ ಗೋಡೆ ಕುಸಿದು ಮಹಿಳೆ ಸಾವು:
ಇನ್ನೂ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ತ್ರಿವೇಣಿ(24 ವ) ಎಂಬ ಮಹಿಳೆ ಮೃತಪಟಿದ್ದಾರೆ.
ಬ್ಯಾಡರಹಳ್ಳಿ ಕೃಷ್ಣಮೂರ್ತಿ ಎಂಬುವವರ ಪತ್ನಿ ತ್ರಿವೇಣಿ ಮಲಗಿದ್ದ ವೇಳೆ ಏಕಾಏಕಿ ಗೋಡೆ ಕುಸಿದು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಬ್ಬಿನಹೊಳೆ ಪಿಎಸ್ಐ ಪರಶುರಾಮ ಲಮಾಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇತ್ತೀಚೆಗೆ ಐಮಂಗಲ ಹೋಬಳಿ ಹೋ.ಚಿ.ಬೋರಯ್ಯನಹಟ್ಟಿಯಲ್ಲಿ ಮನೆ ಗೋಡೆ ಕುಸಿದು ಮೂರು ಜನ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೆ ಮೂರು ಜನ ಗೋಡೆ ಕುಸಿದು ಮೃತರಾಗಿದ್ದು ಜಿಲ್ಲೆಯಲ್ಲಿ ಮಾಳಿಗೆ ಮನೆಗಳಲ್ಲಿ ವಾಸಿಸುವವರಲ್ಲಿ ಆತಂಕ ಮೂಡಿಸಿದೆ.
ಡಂಗೂರ ಸಾರಲು ಡಿಸಿ ಆದೇಶ
ಜಿಲ್ಲೆಯಲ್ಲಿ ಬೀಳುತ್ತಿರುವ ಮಳೆಯಿಂದ ಕೆಲವು ಭಾಗಗಳಲ್ಲಿ ಮನೆ ಕುಸಿದು ಪ್ರಾಣಹಾನಿ ಪ್ರಕರಣಗಳು ಸಂಭವಿಸುತ್ತಿರುವುದರಿಂದ ತಮ್ಮ ತಾಲ್ಲೂಕು ವ್ಯಾಪ್ತಿಗಳಲ್ಲಿ ಗ್ರಾ.ಲೆಕ್ಕಿಗ ಹಾಗೂ ಪಿ.ಡಿ.ಓ. ಗಳ ಮೂಲಕ ಗ್ರಾಮಗಳಲ್ಲಿ ಡಂಗೂರ ಸಾರಿ ಶಿಥಿಲವಾಗಿರುವ ಮನೆಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳುವುದು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ಕೂಡಲೇ ತೆರೆಯುವುದು. ಪರಿಸ್ಥಿತಿಯನ್ನು ಕಾಲ ಕಾಲಕ್ಕೆ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಹಶೀಲ್ದಾರ್ ಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.