ಕಲಾಪ ಬಹಿಷ್ಕಾರ : ವಕೀಲರ ಸಂಘಗಳಿಗೆ ಹೈಕೋರ್ಟ್ ನೋಟಿಸ್
Team Udayavani, Mar 12, 2021, 7:10 PM IST
ಬೆಂಗಳೂರು: ವಿವಿಧ ಕಾರಣಗಳಿಗೆ ಕೋರ್ಟ್ ಕಲಾಪದಿಂದ ಹೊರಗುಳಿದ ಹಿನ್ನೆಲೆಯಲ್ಲಿ ದಾವಣಗೆರೆ, ಮಂಡ್ಯ, ಮದ್ದೂರು, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಮಳವಳ್ಳಿ ಹಾಗೂ ಪಾಂಡವಪುರ ವಕೀಲರ ಸಂಘಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ನ್ಯಾಯಾಂಗ ನಿಂದನೆ ಪ್ರಕರಣದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ದಾವಣಗೆರೆ, ಮಂಡ್ಯ, ಮದ್ದೂರು, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಮಳವಳ್ಳಿ ಹಾಗೂ ಪಾಂಡವಪುರ ವಕೀಲರ ಸಂಘದ ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ, ಏಪ್ರಿಲ್ 12ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.
ವಕೀಲ ಸಮುದಾಯ (ಬಾರ್)ದ ಮುಖ್ಯಸ್ಥರಾಗಿರುವ ಅಡ್ವೋಕೇಟ್ ಜನರಲ್ ಸಾಂವಿಧಾನಿಕ ಹುದ್ದೆಯ ಜೊತೆಗೆ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರೂ ಆಗಿರುತ್ತಾರೆ. ಆದ್ದರಿಂದ ಈ ಪ್ರಕರಣದಲ್ಲಿ ಹಾಜರಾಗಿ ನ್ಯಾಯಾಲಯಕ್ಕೆ ನೆರವು ನೀಡಬೇಕು ಎಂದು ಅಡ್ವೋಕೇಟ್ ಜನರಲ್ ಅವರಿಗೆ ಸೂಚಿಸಿದ ನ್ಯಾಯಪೀಠ, ಕೋರ್ಟ್ ಆದೇಶದ ಪ್ರತಿ ಹಾಗೂ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿಯನ್ನು ಅಡ್ವೋಕೇಟ್ ಜನರಲ್ ಅವರಿಗೆ ತಲುಪಿಸಬೇಕು ಎಂದು ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ : ದುರಾಡಳಿತದಿಂದ ನಿರುದ್ಯೋಗ ಹೆಚ್ಚಳ; ಈಶ್ವರ ಖಂಡ್ರೆ
“ದಂಡನೆಗೊಳಪಡಿಸುವ ಉದ್ದೇಶದಿಂದ ಈ ನ್ಯಾಯಾಂಗ ನಿಂದನೆ ದಾಖಲಿಸಿಕೊಂಡಿಲ್ಲ. ಕೋರ್ಟ್ ಕಲಾಪಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಹಳ ಸ್ಪಷ್ಟವಾಗಿದೆ. ಈ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ. ಪರಿಣಾಮಕಾರಿ ನ್ಯಾಯದಾನ ಪ್ರಕ್ರಿಯೆಯಲ್ಲಿ ವಕೀಲರು ಪ್ರಮುಖ ಭಾಗಿದಾರರಾಗಿದ್ದಾರೆ. ಅವರ ಸಹಕಾರ ಇಲ್ಲದೇ ಕೋರ್ಟ್ ಕಲಾಪ ನಡೆಸುವುದು, ತ್ವರಿತ ನ್ಯಾಯದಾನ ಪ್ರಕ್ರಿಯೆ ಕೈಗೊಂಡು ಕಕ್ಷಿದಾರರು ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ನ್ಯಾಯದಾನ ಪ್ರಕ್ರಿಯೆಗೆ ನ್ಯಾಯಾಲಯ (ಬೆಂಚ್) ಮತ್ತು ವಕೀಲರು (ಬಾರ್) ಇಬ್ಬರು ಬದ್ಧತೆ ಪ್ರದರ್ಶಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಳ್ಳಲಾಗಿದೆ’ ನ್ಯಾಯಪೀಠ ಅಭಿಪ್ರಾಯಪಟ್ಟಿತು.
ವಿವಿಧ ಕಾರಣಗಳನ್ನು ಮುಂದಿಟ್ಟು ಕೋರ್ಟ್ ಕಲಾಪ ಬಹಿಷ್ಕರಿಸುವಂತೆ ಮಂಡ್ಯ ಜಿಲ್ಲಾ ವಕೀಲರ ಸಂಘ ಕರೆ ನೀಡಿತ್ತು. ಅದರಂತೆ, ಮದ್ದೂರು, ಕೆ.ಆರ್. ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ, ಮಳವಳ್ಳಿ ಮತ್ತು ಪಾಂಡವಪುರ ವಕೀಲರು ಜನೆವರಿ ಮತ್ತು ಫೆಬ್ರವರಿಯಲ್ಲಿ ಕೋರ್ಟ್ ಕಲಾಪಗಳಿಂದ ಹೊರಗುಳಿದಿದ್ದರು. ಅದೇ ರೀತಿ ಜ.29 ಮತ್ತು ಫೆ.8ರಂದು ಕೋರ್ಟ್ ಕಲಾಪಗಳಿಂದ ದೂರ ಉಳಿಯುವಂತೆ ದಾವಣಗೆರೆ ಜಿಲ್ಲಾ ವಕೀಲರ ಸಂಘ ಕರೆ ಕೊಟ್ಟಿತ್ತು. ಇದಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಳ್ಳಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠ ಸೂಚಿಸಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಕೈ ಬಿಡುವಂತೆ ಬೆಂಗಳೂರು ವಕೀಲರ ಸಂಘ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.