ಖಾಸಗಿ ಎಂಜಿನಿಯರಿಂಗ್ ಕಾಲೇಜು ಕ್ರಮಕ್ಕೆ ಹೈಕೋರ್ಟ್ ತರಾಟೆ
Team Udayavani, Jul 26, 2023, 7:13 AM IST
ಬೆಂಗಳೂರು: ಸೂಪರ್‌ನ್ಯೂಮರರಿ ಕೋಟಾದಡಿ ಎಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶ ಪಡೆದಿದ್ದ ವಿದ್ಯಾರ್ಥಿಯ ಸ್ಕಾಲರ್‌ಶಿಪ್ ಹಣವನ್ನು ಟ್ಯೂಷನ್ ಶುಲ್ಕವನ್ನಾಗಿ ಪರಿವರ್ತಿಸಿಕೊಂಡ ಖಾಸಗಿ ಎಂಜಿನಿಯರಿಂಗ್ ಕಾಲೇಜೊಂದರ ಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಸಂಬಂಧಿಸಿದ ಕಾಲೇಜು ವಿರುದ್ಧ ಸೂಕ್ತ ಕ್ರಮ ಜರಗಿಸಬೇಕೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ನಿರ್ದೇಶಿಸಿದೆ.
ತನ್ನ ವಿದ್ಯಾರ್ಥಿ ವೇತನದ (ಸ್ಕಾಲರ್‌ಶಿಪ್) ಹಣವನ್ನು ಟ್ಯೂಷನ್ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಂಡಿದ್ದ ಮೈಸೂರಿನ ಅಕಾಡೆಮಿ ಫಾರ್ ಟೆಕ್ನಿಕಲ್ ಆ್ಯಂಡ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಕ್ರಮವನ್ನು ಆಕ್ಷೇಪಿಸಿ ವಿದ್ಯಾರ್ಥಿ ಆದಿತ್ಯ ದೀಪಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸೂಪರ್‌ನ್ಯೂಮರರಿ ಕೋಟಾ ಸೃಷ್ಟಿಸಿರುವುದೇ ದುರ್ಬಲ ವರ್ಗದವರಿಗೆ ಸಮಾನ ಅವಕಾಶಗಳನ್ನು ನೀಡುವುದು ಮತ್ತು ಅವರನ್ನು ರಕ್ಷಿಸುವುದಾಗಿದೆ. ಆದರೆ ಅದೇ ಕೋಟಾದಡಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗೆ ಟ್ಯೂಷನ್ ಶುಲ್ಕ ವಿಧಿಸಿದ್ದ ಕ್ರಮ ವ್ಯವಸ್ಥಿತ ತಾರತಮ್ಯದಿಂದ ಕೂಡಿದೆ ಎಂದು ಕಟುವಾಗಿ ಹೇಳಿ ವಿದ್ಯಾರ್ಥಿಗೆ ಶುಲ್ಕವನ್ನು ಹಿಂತಿರುಗಿಸಬೇಕು ಮತ್ತು ವಿದ್ಯಾರ್ಥಿ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದಕ್ಕೆ ಒಂದು ಲಕ್ಷ ರೂ. ಠೇವಣಿ ಇಡಬೇಕೆಂದು ಕಾಲೇಜಿಗೆ ನಿರ್ದೇಶನ ನೀಡಿದೆ.
ಜತೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಆ ಕಾಲೇಜಿಗೆ ಶೋಕಾಸ್ ನೋಟಿಸ್ ನೀಡಬೇಕು ಮತ್ತು ಸೂಪರ್‌ನ್ಯೂಮರರಿ ಕೋಟಾದ ವಿದ್ಯಾರ್ಥಿಯಿಂದ ಅಕ್ರಮವಾಗಿ ಟ್ಯೂಷನ್ ಫೀ ಸಂಗ್ರಹ ಮಾಡಿದ್ದಕ್ಕಾಗಿ ಸೂಕ್ತ ಕ್ರಮ ಜರಗಿಸಬೇಕು ಎಂದೂ ನ್ಯಾಯಾಲಯ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.