ಹಿಜಾಬ್ ವಿವಾದ ಭಾರತದ ಹೆಸರು ಕೆಡಿಸುವ ಪ್ರಯತ್ನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಅಲ್ಲಾಹು ಅಕ್ಬರ್ ಘೋಷಣೆ ಕೂಗಿದವಳನ್ನು ವೈಭವೀಕರಣ ಮಾಡಲಾಯಿತು..!
Team Udayavani, Feb 19, 2022, 7:24 PM IST
ಧಾರವಾಡ: ಹಿಜಾಬ್ ವಿವಾದವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿ ಭಾರತದ ಹೆಸರು ಕೆಡಿಸುವ ಪ್ರಯತ್ನ ಸಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳಲ್ಲಿ ಕೇಸರಿ ಧ್ವಜ, ಹಿಜಾಬ್, ಟೋಪಿ ಹಾಕಬಾರದು. ಇದರಿಂದ ಮುಸ್ಲಿಂ, ಹಿಂದೂ ಎಂಬ ಭಾವ ಶುರುವಾಗುತ್ತದೆ. ಶಾಲೆಯಲ್ಲಿ ಗುಂಪುಗಳು ಬೆಳೆಯುತ್ತವೆ. ಇದನ್ನು ದುರುದ್ದೇಶಪೂರ್ವಕವಾಗಿ ಕೆಲವರು ಮಾಡುತ್ತಿದ್ದು, ಭಾರತ ವಿರೋಧಿ ಸಂಘಟನೆಗಳು ಪ್ರಚಾರ ಮಾಡುತ್ತಿವೆ. ಇದಕ್ಕಾಗಿ ಟೂಲ್‌ಕಿಟ್ ತಯಾರಾಗಿದೆ. ಹಿಜಾಬ್ ವಿಷಯದಲ್ಲಿ ಕೆಲ ಸಂಘಟನೆಗಳು ಭಾರತ ಹೆಸರು ಕೆಡಿಸುವ ಪ್ರಯತ್ನ ನಡೆಸಿವೆ. ಕೆಲವರು ದುರುದ್ದೇಶಪೂರ್ವಕ ಈ ಕೆಲಸ ಮಾಡುತ್ತಿದ್ದಾರೆ. ಭಾರತದ ವಿರೋಧಿ ಸಂಘಟನೆಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದವಳನ್ನು ವೈಭವೀಕರಣ ಮಾಡಲಾಯಿತು. ಹೀಗೆ ಅನೇಕ ವಿಚಾರದಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ದೇಶದ ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಇನ್ನು ಕಾಂಗ್ರೆಸ್ ಪಕ್ಷವು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬಾರದು ಎಂದರು.
ಹಿಜಾಬ್ ವಿಚಾರವಾಗಿ ಕಾಂಗ್ರೆಸ್‌ನಲ್ಲಿ 2 ಗುಂಪುಗಳಾಗಿವೆ. ಹಿಜಾಪ್ ಪರ ಹಾಗೂ ವಿರೋಧದ ನಿರ್ಣಯ ಕೈಗೊಳ್ಳುವ ಕುರಿತು ಅವರಲ್ಲೇ ಗೊಂದಲ ಇದೆ. ತಮ್ಮ ನಿಲುವನ್ನ ಸ್ಪಷ್ಟಪಡಿಸಲು ಅಧಿವೇಶನ ಹಾಳು ಮಾಡುತ್ತಿದ್ದಾರೆ. ಆಂತರಿಕ ಸಮಸ್ಯೆ ಮುಚ್ಚಿಡಲು ಈಶ್ವರಪ್ಪ ಹೇಳಿಕೆ ಮುಂದಿಟ್ಟುಕೊಂಡು ಅಽವೇಶನ ಹಾಳು ಮಾಡುತ್ತಿದ್ದಾರೆ. ಸಚಿವ ಈಶ್ವರಪ್ಪ ಅವರು 100-200 ವರ್ಷಗಳ ನಂತರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸಲಾಗುವುದು ಎಂಬ ಹೇಳಿಕೆ ಕೊಟ್ಟಿದ್ದು, ಆದರೆ ಕಾಂಗ್ರೆಸ್ ಪಕ್ಷ ಇದನ್ನೇ ವಿಷಯವನ್ನಾಗಿಸಿಕೊಂಡು ಅಧಿವೇಶನ ಹಾಳು ಮಾಡುತ್ತಿದೆ ಎಂದು ಆಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.