ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಅಂತಿಮ ತೀರ್ಪಿಗೆ ಇನ್ನೂ ಕಾಯಬೇಕು

Team Udayavani, Feb 9, 2022, 3:11 PM IST

1-ffdsfsd

ಬೆಂಗಳೂರು : ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನಲ್ಲಿ ಬುಧವಾರ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿ ಆದೇಶ ನೀಡಿದ್ದಾರೆ.

ಮಧ್ಯಂತರ ಆದೇಶವನ್ನು ವಿಭಾಗೀಯ ಪೀಠವೇ ನೀಡಲಿ , ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ವಿಸ್ಕ್ರತ ಪೀಠ ರಚನೆನ್ನು ನ್ಯಾಯಮೂರ್ತಿಯೇ ನಿರ್ಧರಿಸಲಿ ಎಂದು ಹೇಳಿ ಸಂಪೂರ್ಣ ಕಡತವನ್ನು ಮುಖ್ಯ ನ್ಯಾಯಮೂರ್ತಿಗೆ ಹಸ್ತಾಂತರಿಸಿ ದಾಖಲೆಗಳನ್ನು ಸಲ್ಲಿಸುವಂತೆ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ.

ಇದು ತುರ್ತಾಗಿ ಬಗೆ ಹರಿಸಬೇಕಾದ ಪ್ರಕರಣ. ಪ್ರಕರಣದಲ್ಲಿ ಅನೇಕ ಮುಖ್ಯ ಪ್ರಶ್ನೆಗಳು ಮೂಡಿದ್ದು, ಮಧ್ಯಂತರ ಆದೇಶವನ್ನೂ ನ್ಯಾಯಮೂರ್ತಿಗಳೇ ನೀಡಲಿ ಎಂದು ಏಕ ಸದಸ್ಯ ಪೀಠ ಹೇಳಿದೆ.

ನಾಡಿದ್ದು, ಶುಕ್ರವಾರ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ತೀರ್ಪಿಗಾಗಿ ಇಡೀ ರಾಜ್ಯವೇ ಕಾಯುತ್ತಿದ್ದ ವೇಳೆ ಬೆಂಗಳೂರು ನಗರ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹಿಜಾಬ್‌ ಧರಿಸಿದವರಿಗೆ ಪ್ರವೇಶ ನಿರ್ಬಂಧ ಮತ್ತು ವಸ್ತ್ರ ಸಂಹಿತೆ ಜಾರಿಗೊಳಿಸಿರುವ ಸರಕಾರದ ಆದೇಶ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಚಾರಣೆ ನಡೆಸಿ ತೀರ್ಪು ನೀಡಲಿದೆ.

ಅರ್ಜಿದಾರ ವಿದ್ಯಾರ್ಥಿನಿ ಪರ  ಸಂಜಯ್ ಹೆಗಡೆ ಮತ್ತು ಇತರ ವಕೀಲರು  ವಾದ ಮಂಡಿಸಿದರು. ಕಾಲೇಜಿನ ಪರ ವಕೀಲ ಸಜ್ಜನ್ ಪೂವಯ್ಯ,ಸರಕಾರದ ಪರ ವಕೀಲ ಎಜಿ ನಾವದಗಿ ವಾದ ಮಂಡನೆ ಮಾಡಿದರು.

ಹಿಜಾಬ್‌ ಪ್ರಕರಣ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್‌, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸ ಬಾರದು, ಶಾಂತಿ ಮತ್ತು ಸುವ್ಯವಸ್ಥೆ ಕಾಯ್ದು ಕೊಳ್ಳಬೇಕು ಎಂದು ಮಂಗಳವಾರ ಸೂಚಿಸಿತ್ತು.

ಜನರ ವಿವೇಕದ ಮೇಲೆ ನ್ಯಾಯಾಲಯಕ್ಕೆ ಸಂಪೂರ್ಣ ನಂಬಿಕೆ ಇದೆ. ಅದನ್ನು ಜನರು ಕಾರ್ಯರೂಪಕ್ಕೆ ತರುತ್ತಾರೆ ಎಂದು ನ್ಯಾಯಾಲಯ ವಿಶ್ವಾಸ ಹೊಂದಿದೆ ಎಂದು ಹೇಳಿತು. ಇಂತಹ ಸಂಗತಿಗಳಿಂದ ನ್ಯಾಯಾಲಯ ವನ್ನು ಯಾರೂ ಪ್ರಭಾ ವಿಸುವಂತಿಲ್ಲ. ನ್ಯಾಯಾಲಯ ಮತ್ತು ನ್ಯಾಯಾ ಧೀಶರು ಇಂತಹದಕ್ಕೆಲ್ಲ ಮಣಿಯುವುದಿಲ್ಲ. ಆದರೆ ಇಂತಹ ಪ್ರತಿ ಭಟನೆಗಳು ಮತ್ತು ಗಲಭೆಗಳನ್ನು ಟಿ.ವಿ. ಗಳಲ್ಲಿ ನೋಡಿದರೆ ಅದು ನ್ಯಾಯಮೂರ್ತಿಗಳ ಮೇಲೆ ಪ್ರಭಾವ ಬೀರುತ್ತದೆ. ಮನಸ್ಸು ಘಾಸಿಯಾಗುತ್ತದೆ. ಬೌದ್ಧಿಕ ಶಕ್ತಿ ಬಳಸಿ, ಹೃದಯದಿಂದ ತೀರ್ಪು ನೀಡಬೇಕಾದಾಗ ಇಂಥ ಘಟನೆಗಳು ಮನಸ್ಸನ್ನು ಘಾಸಿಗೊಳಿಸುತ್ತವೆ. ಹಾಗಾಗಿ ಶಾಂತಿಯಿಂದ ತೀರ್ಪು ನೀಡಲು ಬಿಡಿ ಎಂದು ನಾ| ಕೃಷ್ಣ ದೀಕ್ಷಿತ್‌ ಮಂಗಳವಾರ ಹೇಳಿದ್ದರು.

ಟಾಪ್ ನ್ಯೂಸ್

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.