ಹೈಕೋರ್ಟ್ ಹಿಜಾಬ್ ವಿಚಾರಣೆ : ಯೂನಿಫಾರ್ಮ್ ಕಾಯ್ದೆ ಕುರಿತು ಚರ್ಚೆ
ಯಾವ ಅಧಿಕಾರದಿಂದ ವಿದ್ಯಾ ರ್ಥಿನಿಯರನ್ನು ಹೊರಗಿರಿಸಲಾಗಿದೆ ?
Team Udayavani, Feb 16, 2022, 3:14 PM IST
ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ಮುಂದುವರಿಸಿದೆ.
ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಫೆ 16 ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭಿಸಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು ವಾದ ಮಂಡನೆ ಮಾಡುತ್ತಿದ್ದಾರೆ.
1995 ರ ಯೂನಿಫಾರ್ಮ್ ಆಕ್ಟ್ ಕುರಿತು ವಿವರಗಳನ್ನು ನೀಡಿದ್ದು, ಒಮ್ಮೆ ಸಮವಸ್ತ್ರ ಜಾರಿಯಾದರೆ ಶಿಕ್ಷಣ ಸಂಸ್ಥೆ ೫ ವರ್ಷಗಳ ಕಾಲ ಅದನ್ನು ಬದಲಾವಣೆ ಮಾಡುವಂತಿಲ್ಲ. ಒಂದೊಮ್ಮೆ ಬದಲಾವಣೆ ಮಾಡಬೇಕಾದರೂ ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಿಯೇ ಮಾಡಬೇಕಾಗುತ್ತದೆ ಎಂದಿದ್ದಾರೆ.
ಯಾವ ಅಧಿಕಾರದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಯರನ್ನು ಹೊರಗಿಡಲಾಗಿದೆ ಎಂದು ಸರಕಾರದ ನಿರ್ಧಾರದ ಕುರಿತು ನ್ಯಾಯ ಪೀಠವನ್ನು ಪ್ರಶ್ನಿಸಿದ್ದಾರೆ.
ಪಿಯು ಕಾಲೇಜುಗಳ ಶಿಕ್ಷಣದ ಗುಣಮಟ್ಟ ಕಾಪಾಡಲು ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆಯ ಕುರಿತು ತಿಳಿಸಿದರು. ಸರಕಾರ ಇದನ್ನು ಆದೇಶವಾಗಿ ನೀಡಿಲ್ಲ, ಕೇವಲ ಸುತ್ತೋಲೆ ಎಂದು ತಿಳಿಸಿದರು.
ಸರಕಾರದ ಪರವಾಗಿ ಅಡ್ವೊಕೇಟ್ ಜನರಲ್ ವಾದ ಮಂಡಿಸಿ ವಿದ್ಯಾರ್ಥಿಗಳು ನಿರ್ದಿಷ್ಟ ವಸ್ತ್ರ ಸಂಹಿತೆ (ಡ್ರೆಸ್ಕೋಡ್)ಗೆ ಒತ್ತಾಯಿ ಸದೆ ಈಗಿರುವ ವಸ್ತ್ರಸಂಹಿತೆಯನ್ನು ಅನುಸರಿಸಬೇಕು. ಕಾನೂನು ಸುವ್ಯವಸ್ಥೆಯ ಹೊರತಾಗಿಯೂ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಬೇಕು ಎಂಬುದು ಸರಕಾರದ ಕಾಳಜಿ ಎಂದು ಪೀಠಕ್ಕೆ ಸರಕಾರದ ನಿಲುವನ್ನು ಅವರು ವಿವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.