ಹಿಜಾಬ್ ವಿಚಾರ: ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿ
ಬಂದ್, ಪ್ರತಿಭಟನೆಗೆ ಬಿಜೆಪಿ ಆಕ್ಷೇಪ, ಕಾಂಗ್ರೆಸ್ ಸಮರ್ಥನೆ
Team Udayavani, Mar 17, 2022, 1:01 PM IST
ವಿಧಾನಸಭೆ : ಹೈಕೋರ್ಟ್ ತೀರ್ಪಿನ ಬಳಿಕವೂ ಕೆಲವರು ಹಿಜಾಬ್ ವಿಚಾರ ಸಂಬಂಧ ಪ್ರತಿಭಟನೆ ನಡೆಸುವುದಕ್ಕೆ ಮುಂದಾಗಿರುವುದು ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ.
ಶೂನ್ಯವೇಳೆಯಲ್ಲಿ ಹಿಜಾಬ್ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ರಘುಪತಿ ಭಟ್ ಹೈಕೋರ್ಟ್ ತೀರ್ಪು ಬಂದ ನಂತರವೂ ಕೆಲವರು ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ಅಂತಹವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಳೆದ ಬಾರಿ ಪರೀಕ್ಷೆ ತಪ್ಪಿಸಿಕೊಂಡಿದ್ದು,ಈಗ ಹಿಜಾಬ್ ತೆಗೆದಿಟ್ಟು ಹೋಗಲು ಮುಂದಾಗುವ ವಿದ್ಯಾರ್ಥಿನಿಯರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಒತ್ತಾಯಿಸಿದರು. ಆಗ ರಘುಪತಿ ಭಟ್ ರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡರು.ಕೋರ್ಟ್ ತೀರ್ಪಿನ ವಿರುದ್ದ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಪ್ರತಿಪಾದಿಸಿದರು.
ಆಗ ಪ್ರತಿಭಟನಾಕಾರರ ಸಮರ್ಥನೆಗೆ ಮುಂದಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಕೋರ್ಟ್ ತೀರ್ಪಿನ ವಿರುದ್ಧವಾಗಿಲ್ಲ.ಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.ಅದರ ಜೊತೆಗೆ ಶಾಂತಿಯುತವಾಗಿ ಬಂದ್, ಪ್ರತಿಭಟನೆ ಮಾಡುವುದು ಅವರ ಸಂವಿಧಾನಾತ್ಮಕ ಹಕ್ಕು. ಅದನ್ನು ಸರ್ಕಾರ ಹೇಗೆ ತಡೆಯಲು ಸಾಧ್ಯ ? ಬಂದ್, ಪ್ರತಿಭಟನೆ ಮಾಡಲು ಬಿಡಿ ಎಂದು ವಾದಿಸಿದರು.
ಕಾಂಗ್ರೆಸ್ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ನ್ಯಾಯಾಲಯಕ್ಕೆ ಅಗೌರವ ತೋರಿಸಬೇಕು ಎಂಬ ಕಾರಣಕ್ಕೆ ಬಂದ್ ಕರೆಕೊಟ್ಟಿಲ್ಲ. ಅಸಮಾಧಾನದ ಕಾರಣಕ್ಕೆ ಧಾರ್ಮಿಕ ಮುಖಂಡರು ಬಂದ್ ಕರೆ ಕೊಟ್ಟಿದ್ದಾರೆ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ, ಇದರಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡುವುದು ಮಹಾ ಪಾಪದ ಕೆಲಸ. ಶಾಲೆಗಳಲ್ಲಿ ಸಮವಸ್ತ್ರ ಯಾಕೆ ಇರಬೇಕೆಂಬ ಬಗ್ಗೆ ಕೋರ್ಟ್ ನಲ್ಲಿ ಹತ್ತು ದಿನಗಳ ಕಾಲ ವಿವರವಾದ ವಿಚಾರಣೆ ನಡೆದಿದೆ. ಆ ಬಳಿಕವಷ್ಟೇ ಕೋರ್ಟ್ ತೀರ್ಪು ನೀಡಲಾಗಿದೆ.ಅದನ್ನು ಧಿಕ್ಕರಿಸಿ ಪ್ರತಿಭಟನೆ, ಬಂದ್ ಮಾಡುವುದು ಎಷ್ಟು ಸರಿ ? ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಮಾಧುಸ್ವಾಮಿ, ಕೋರ್ಟ್ ಆದೇಶದ ನಂತರವೂ ಕೆಲ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿಲ್ಲ. ಈಗ ಅವರಿಗೆ ಎರಡನೆ ಅವಕಾಶ ಕೊಡುವ ಬಗ್ಗೆ ಸರ್ಕಾರ ವಿಮರ್ಶೆ ಮಾಡಬಹುದು. ಆದರೆ ನಾವು ಇದನ್ನೇ ಬೆಳೆಸಿಕೊಂಡು ಹೋದರೆ ಮುಂದೆ ಬೇರೆ ರೀತಿಯ ಪರಿಣಾಮಗಳಾಗುತ್ತವೆ. ಬೇಕೆಂದಾಗಲೆಲ್ಲಾ ಪರೀಕ್ಷೆ ಬರೆಯಲು ಕೇಳಿದ್ರೆ ಅವಕಾಶ ಕೊಡಲು ಆಗುತ್ತದೆಯೇ ?ಅದಕ್ಕೆ ಅವಕಾಶ ಕೊಡುತ್ತಾ ಹೋದರೆ ಪರೀಕ್ಷಾ ವ್ಯವಸ್ಥೆ ಉಳಿಯುತ್ತದೆಯೇ ?ಪರೀಕ್ಷೆ ಅಂದ್ರೆ ಎಲ್ಲರಿಗೂ ಒಮ್ಮೆ ಮಾತ್ರ ಅವಕಾಶ ಕೊಡುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.