ಹಿಜಾಬ್- ಕೇಸರಿ ಶಾಲು ವಿವಾದ: ಎರಡು ಕೋಮಿನ ನಡುವೆ ಕಲ್ಲುತೂರಾಟ
Team Udayavani, Feb 8, 2022, 11:02 AM IST
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಹಾಕುವ ಕುರಿತು ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಿವಾದ ಉಂಟಾಗಿದ್ದು, ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ ಎರಡು ಕೋಮಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಿಗುವಿನ ವಾತಾವರಣ ಉಂಟಾಗಿದೆ.
ಹಿಜಾಬ್ ಧರಿಸಿದ ವಿದ್ಯಾಥಿ೯ನಿಯರನ್ನು ಗೇಟ್ ಮುಂದೆ ಪೊಲೀಸರು ತಡೆದಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸ್ಥಳಕ್ಕೆ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳಿ, ಡಿವೈಎಸ್ಪಿ ಎಮ್ ಪಾಂಡುರಂಗಯ್ಯ, ಸಿಪಿಐ ಜೆ. ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.