ಹಿಜಾಬ್ ವಿವಾದ ಬಿಜೆಪಿ ಪ್ರಾಯೋಜಿತ,ಕಾಂಗ್ರೆಸ್ ದ್ವಂದ್ವ ನಿಲುವು:ಎಸ್ ಡಿಪಿಐ ಆಕ್ರೋಶ
ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಹೈಕೋರ್ಟ್ ಮಧ್ಯಂತರ ಆದೇಶದ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ
Team Udayavani, Feb 16, 2022, 4:13 PM IST
ಬೆಂಗಳೂರು : ಬಿಜೆಪಿಯು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್-ಕೇಸರಿ ಶಾಲು ಸಮಸ್ಯೆಯನ್ನು ಪ್ರಾಯೋಜಿಸಿ ಪ್ರಚಾರ ಮಾಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬುಧವಾರ ಆರೋಪಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್, ಇಡೀ ಪ್ರಕರಣವು ರಾಜ್ಯದ ಬಿಜೆಪಿ ಸರ್ಕಾರ ಪ್ರಾಯೋಜಿತ ‘ಅಪರಾಧ ಕೃತ್ಯ’ ಎಂದು ಆರೋಪಿಸಿದರು.
ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ಸಂವಿಧಾನವು ಎಂದಿಗೂ ನಿಷೇಧಿಸಿಲ್ಲ ಎಂದು ಹೇಳಿದ ಅವರು, ಕಾಲೇಜು ಪ್ರಾಂಶುಪಾಲರೊಬ್ಬರು ಈ ಸಮಸ್ಯೆಯನ್ನು ಸೃಷ್ಟಿಸಿದ್ದಾರೆ, ನಂತರ ಅದನ್ನು ಸಂಘ ಪರಿವಾರದ ಸಂಘಟನೆಗಳು ಕೈಗೆತ್ತಿಕೊಂಡವು. ದಾರ ಮತ್ತು ನಾಮದಂತಹ ಹಿಂದೂ ಚಿಹ್ನೆಗಳನ್ನು ಅನುಮತಿಸಿದಾಗ ಹಿಜಾಬ್ ಅನ್ನು ಧಾರ್ಮಿಕ ಸಂಕೇತವಾಗಿ ಏಕೆ ನಿಷೇಧಿಸಬೇಕು ಎಂದು ಅವರು ಕೇಳಿದರು. ಈ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು.
ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಅಭಿವೃದ್ಧಿ ಸಮಿತಿಗಳು ಡ್ರೆಸ್ ಕೋಡ್ ನಿಗದಿಪಡಿಸಿರುವ ಕಾಲೇಜುಗಳಿಗೆ ಮಾತ್ರ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಆದೇಶದ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಬೇಕು ಎಂದರು. ಪಕ್ಷವು ಅಲ್ಪಸಂಖ್ಯಾತರ ಮತಗಳನ್ನು ಬಯಸಿದ್ದರೂ ಮುಸ್ಲಿಮರ ಸಮಸ್ಯೆಗಳನ್ನು ಪರಿಹರಿಸಲು ಬಯಸುವುದಿಲ್ಲ ಎಂದು ಮಜೀದ್ ಹೇಳಿದರು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮಹಿಳಾ ವಿಭಾಗವಾದ ನ್ಯಾಷನಲ್ ವುಮೆನ್ಸ್ ಫ್ರಂಟ್, ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹುಡುಗಿಯರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಎನ್‌ಡಬ್ಲ್ಯುಎಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ಜುಲೈಖಾ ಬಜ್ಪೆ ಅವರು ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸುವ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ‘ಹಿಂಸೆ’ ನೀಡುತ್ತಿರುವ ಕೆಲವು ಶಾಲಾ ಆಡಳಿತ ಮಂಡಳಿಗಳು ಮತ್ತು ಶಿಕ್ಷಕರ ವರ್ತನೆಯನ್ನು ಖಂಡಿಸಿದರು.
ಈ ಆದೇಶವು ಪ್ರಿ-ಯೂನಿವರ್ಸಿಟಿ ಕಾಲೇಜುಗಳಿಗೆ ಸೀಮಿತವಾಗಿದ್ದರೂ, ಅಧಿಕಾರಿಗಳು ಇತರ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ತೆಗೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಂತಹ ಕೃತ್ಯಗಳು ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ನಿರಾಕರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.